ದಾವಣಗೆರೆ:ಬೆಣ್ಣೆಗೆ ನಗರಿ ದಾವಣಗೆರೆಯನ್ನು ವಿಶ್ವದ ಭೂಪಟದಲ್ಲಿ ಗುರುತಿಸುವಂತೆ ಮಾಡಿದ ಶ್ರೇಯಸ್ಸು ದಿವಂಗತ ಶಾಮನೂರು ಶಿವಶಂಕರಪ್ಪ ಹಾಗೂ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೆ ಸಲ್ಲುತ್ತದೆ. ಇದೀಗ ನಾಲ್ಕನೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವ ಮಲ್ಲಿಕಾರ್ಜುನ್ ಅವರ ಸಾರಥ್ಯದಲ್ಲಿ ದಾವಣಗೆರೆ ಜಿಲ್ಲೆಯ ಪ್ರಗತಿಗೆ ಹೊಸ ಚೈತನ್ಯ ಲಭಿಸಿದೆ ಎಂದು ದಾವಣಗೆರೆ ಉತ್ತರ ವಿಧಾನಸಭಾ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಜೇಂದ್ರ ಜಗನ್ನಾಥ್ ಆಶಯ ವ್ಯಕ್ತಪಡಿಸಿದ್ದಾರೆ.
ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶಾಮನೂರು ಕುಟುಂಬದ ನಾಯಕತ್ವ ಪ್ರಮುಖ ಪಾತ್ರ ವಹಿಸಲಿದೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಅನುಭವ ಹಾಗೂ ದೂರದೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಸ್ಥಗಿತಗೊಂಡಿದ್ದ ಮತ್ತು ಹೊಸದಾಗಿ ರೂಪುಗೊಳ್ಳಬೇಕಿದ್ದ ಮೂಲಸೌಕರ್ಯ ಯೋಜನೆಗಳಿಗೆ ಭಾರಿ ವೇಗ ದೊರೆಯಲಿದೆ ಎಂದು ತಿಳಿಸಿದ್ದಾರೆ.
ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರ ನೇತೃತ್ವದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶೈಕ್ಷಣಿಕ, ವೈದ್ಯಕೀಯ ಮತ್ತು ಕೈಗಾರಿಕಾ ಕ್ಷೇತ್ರಗಳ ಸುಧಾರಣೆಗೆ ನೀಲನಕ್ಷೆ ಸಿದ್ಧಗೊಳ್ಳುತ್ತಿದೆ. ಸ್ಥಳೀಯ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಔದ್ಯೋಗಿಕ ಅವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶಾಮನೂರು ಕುಟುಂಬ ನೀಡಿರುವ ಕೊಡುಗೆಯನ್ನು ಮುಂದುವರಿಸಿಕೊಂಡು ಹೋಗುವಲ್ಲಿ ಮಲ್ಲಿಕಾರ್ಜುನ್, ಪ್ರಭಾ ಮಲ್ಲಿಕಾರ್ಜುನ್, ಸಮರ್ಥ್ ಶಾಮನೂರು ಸಮರ್ಥರಿದ್ದಾರೆ. ದಾವಣಗೆರೆಯ ಸರ್ವತೋಮುಖ ಅಭಿವೃದ್ಧಿ ಹಾಗೂ ಮುಂಬರುವ ದಿನಗಳಲ್ಲಿ ಜಿಲ್ಲೆ ಮತ್ತಷ್ಟು ಮಾದರಿಯಾಗಿ ಬೆಳೆಯಲಿದೆ ಎಂಬ ವಿಶ್ವಾಸವಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಗಜೇಂದ್ರ ಜಗನ್ನಾಥ್ ತಿಳಿಸಿದ್ದಾರೆ.
- Davanagere development
- Davanagere Infrastructure Growth
- DAVANAGERE NEWS
- Dr. Prabha Mallikarjun
- Gajendra Jagannath
- Karnataka Congress
- Samarth Shamanur
- Shamanur Shivashankarappa
- SS Mallikarjun Minister
- ಎಸ್. ಎಸ್. ಮಲ್ಲಿಕಾರ್ಜುನ್
- ಕರ್ನಾಟಕ ಕಾಂಗ್ರೆಸ್
- ಗಜೇಂದ್ರ ಜಗನ್ನಾಥ್
- ಡಾ. ಪ್ರಭಾ ಮಲ್ಲಿಕಾರ್ಜುನ್
- ದಾವಣಗೆರೆ ಅಭಿವೃದ್ಧಿ.
- ದಾವಣಗೆರೆ ಸುದ್ದಿ
- ಮೂಲಸೌಕರ್ಯ ಪ್ರಗತಿ
- ಶಾಮನೂರು ಶಿವಶಂಕರಪ್ಪ
- ಸಮರ್ಥ್ ಶಾಮನೂರು






Leave a comment