ದಾವಣಗೆರೆ: ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಬೆದರಿಕೆ ಇ-ಮೇಲ್ ಬಂದಿದ್ದು, ನ್ಯಾಯಾಲಯ ಸ್ಫೋಟಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.
ಈ ವಿಚಾರ ಗೊತ್ತಾಗುತ್ತಿದ್ದಂತೆ ನ್ಯಾಯಾಧೀಶರು ಮತ್ತು ವಕೀಲರು, ಕಕ್ಷಿದಾರರು ಆತಂಕಕ್ಕೆ ಒಳಗಾದರು. ಕೂಡಲೇ ಪೊಲೀಸರಿಗೆ ಈ ವಿಚಾರ ಮುಟ್ಟಿಸಲಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ಶ್ವಾನದಳದೊಂದಿಗೆ ಆಗಮಿಸಿ ತಪಾಸಣೆ ನಡೆಸಿದರು.
ಅಪರಿಚಿತ ಇ-ಮೇಲ್ ನಿಂದ ಈ ಸಂದೇಶ ಬಂದಿದ್ದು, ತಮಿಳುನಾಡು ಮೂಲದ ವ್ಯಕ್ತಿಯಿಂದ ಇ-ಮೇಲ್ ರವಾನೆಯಾಗಿರುವುದು ಗೊತ್ತಾಗಿದೆ. ಸೋಮವಾರ ಮಧ್ಯಾಹ್ನ 12. 30ಕ್ಕೆ ಆರ್ ಡಿಎಕ್ಸ್ ಬಾಂಬ್ ಸ್ಫೋಟವಾಗಲಿದೆ ಎಂಬ ಎಚ್ಚರಿಕೆಯುಳ್ಳ ಸಂದೇಶ ನ್ಯಾಯಾಲಯದ ಅಧಿಕೃತ ಇ-ಮೇಲ್ ಗೆ ಬಂದಿತ್ತು.
ಮಾಹಿತಿ ತಿಳಿದ ತಕ್ಷಣ ನ್ಯಾಯಾಧೀಶರು, ವಕೀಲರು, ಕಕ್ಷಿದಾರರು, ನ್ಯಾಯಾಲಯದ ಸಿಬ್ಬಂದಿ ಕೋರ್ಟ್ ನಿಂದ ಹೊರಗೆ ಬಂದರು. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದೊಂದಿಗೆ ಪೊಲೀಸ್ ಸಿಬ್ಬಂದಿ ಆಗಮಿಸಿ ತಪಾಸಣೆ ನಡೆಸಿದರು. ಬಳಿಕ ಇದೊಂದು ಹುಸಿ ಬೆದರಿಕೆ ಎಂಬುದು ಗೊತ್ತಾಯಿತು.
ಏನಾಯ್ತು?
ಬೆದರಿಕೆ ಸಂದೇಶ: ಸೋಮವಾರ ಮಧ್ಯಾಹ್ನ 12:30ಕ್ಕೆ ‘ಆರ್ ಡಿಎಕ್ಸ್’ (RDX) ಬಳಸಿ ನ್ಯಾಯಾಲಯವನ್ನು ಸ್ಫೋಟಿಸುವುದಾಗಿ ಅಧಿಕೃತ ಇ-ಮೇಲ್‌ಗೆ ಸಂದೇಶ ಬಂದಿತ್ತು.
ತಪಾಸಣೆ: ಮಾಹಿತಿ ಸಿಗುತ್ತಿದ್ದಂತೆ ನ್ಯಾಯಾಧೀಶರು, ವಕೀಲರು ಹಾಗೂ ಸಾರ್ವಜನಿಕರು ನ್ಯಾಯಾಲಯದ ಆವರಣದಿಂದ ಹೊರಬಂದರು. ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳ ಇಡೀ ಆವರಣವನ್ನು ಕೂಲಂಕಷವಾಗಿ ತಪಾಸಣೆ ನಡೆಸಿತು.
ಹುಸಿ ಬೆದರಿಕೆ: ಸುದೀರ್ಘ ಪರಿಶೀಲನೆಯ ನಂತರ ಯಾವುದೇ ಸ್ಫೋಟಕ ಪತ್ತೆಯಾಗದ ಹಿನ್ನೆಲೆಯಲ್ಲಿ, ಇದೊಂದು ಹುಸಿ ಬೆದರಿಕೆ (Hoax Call) ಎಂದು ಪೊಲೀಸರು ಖಚಿತಪಡಿಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಕೀಲರು, ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿದೆ. ಆದರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸುವಂತಿಲ್ಲ. ಆರ್ಥಿಕ ಮೀಸಲಾತಿ ವಿಚಾರ ಕುರಿತಂತೆ ಇ-ಮೇಲ್ ನಲ್ಲಿ ಪ್ರಸ್ತಾಪಿಸಿ ಕೋರ್ಟ್ ನಲ್ಲಿ ಬಾಂಬ್ ಇಡಲಾಗಿದೆ ಎಂಬ ಸಂದೇಶ ಬಂದಿದೆ ಎಂದು ತಿಳಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ದಾವಣಗೆರೆ ನ್ಯಾಯಾಲಯಕ್ಕೆ ಇಂಥದ್ದೊಂದು ಬೆದರಿಕೆ ಕರೆ ಬಂದಿದ್ದು ಇದೇ ಮೊದಲು. ಇದು ಆತಂಕಕಾರಿ ಬೆಳವಣಿಗೆ. ನ್ಯಾಯಾಲಯದ ಕಲಾಪ, ಕಕ್ಷಿದಾರರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.





Leave a comment