Home ದಾವಣಗೆರೆ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪರ ಸೇವೆ ಮರೆತಿರದ ಕಾರಣ ಕಾಂಗ್ರೆಸ್ ಅಲೆ: ಶೇ. 79ರಷ್ಟು ಜನ ಶಾಮನೂರು ಕುಟುಂಬದ ಪರ ಎಂದ ಡಿ.ಕೆ. ಶಿವಕುಮಾರ್
ದಾವಣಗೆರೆಬೆಂಗಳೂರು

ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪರ ಸೇವೆ ಮರೆತಿರದ ಕಾರಣ ಕಾಂಗ್ರೆಸ್ ಅಲೆ: ಶೇ. 79ರಷ್ಟು ಜನ ಶಾಮನೂರು ಕುಟುಂಬದ ಪರ ಎಂದ ಡಿ.ಕೆ. ಶಿವಕುಮಾರ್

Share
ದಾವಣಗೆರೆ
Share

ದಾವಣಗೆರೆ: “ನಾವು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದು, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್ ಪಕ್ಷ ಎಲ್ಲಾ ಸಮಾಜ, ಎಲ್ಲಾ ವರ್ಗಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತಿದೆ. ಶಾಮನೂರು ಶಿವಶಂಕರಪ್ಪ ಅವರು ರಾಷ್ಟ್ರೀಯ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿದ್ದವರು. ಅವರ ಕೊಡುಗೆ ಅಪಾರವಾಗಿದೆ. ನಾನು ಇಲ್ಲಿ ಪ್ರತ್ಯೇಕ ಸಮೀಕ್ಷೆ ಮಾಡಿಸಿದ್ದು, ಶೇಕಡಾ 79ರಷ್ಟು ಮಂದಿ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ತಿಳಿಸಿದರು. 

ಕೋವಿಡ್ ಸಮಯದಲ್ಲಿ ಶಾಮನೂರು ಶಿವಶಂಕರಪ್ಪನವರು ಮಾಡಿದ ಸಹಾಯ, ಸಹಕಾರವನ್ನು ಜನ ಸ್ಮರಿಸುತ್ತಿದ್ದಾರೆ. ವಿದ್ಯಾ ಕ್ಷೇತ್ರದಲ್ಲಿ ಅವರು ನೀಡಿರುವ ಸೇವೆಯನ್ನು ನೆನೆಯುತ್ತಿದ್ದಾರೆ” ಎಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹೇಳಿದರು.

“ಸಾವಿರಾರು ಜನ ಹೊರಗಡೆಯಿಂದ ಬಂದು ಇಲ್ಲಿ ಶಿಕ್ಷಣ ಪಡೆಯುವಂತೆ ಮಾಡಿರುವವರು ಶಿವಶಂಕರಪ್ಪನವರು. ಅವರಿಂದ ಈ ಜಿಲ್ಲೆ ಪ್ರಸಿದ್ಧವಾಗಿದೆ. ಅವರ ಕುಟುಂಬಕ್ಕೆ ಶಕ್ತಿ ತುಂಬಲು ಜನ ತೀರ್ಮಾನಿಸಿದ್ದಾರೆ. 79% ಜನ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮಾಡುವುದಾಗಿ ಹೇಳಿದ್ದು, ಇದು ಬಹಳ ಸಂತೋಷದ ವಿಚಾರ. ನಮ್ಮ ಗ್ಯಾರಂಟಿಗಳು ಕ್ಷೇತ್ರದ ಮನೆ ಮನೆಗೂ ತಲುಪಿವೆ. 59 ಸಾವಿರ ಬಡ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತಲುಪುತ್ತಿದೆ. 1.40 ಲಕ್ಷ ಜನರಿಗೆ ಅನ್ನ ಭಾಗ್ಯ ಯೋಜನೆ, 59 ಸಾವಿರ ಮನೆಗಳಿಗೆ ಉಚಿತ ವಿದ್ಯುತ್ ಸಿಗುತ್ತಿದೆ. ಮಹಿಳೆಯರು ಬಸ್ ನಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ” ಎಂದು ವಿವರಿಸಿದರು.

“ಗ್ಯಾಸ್, ಪೆಟ್ರೋಲ್, ಡೀಸೆಲ್, ಕಬ್ಬಿಣ, ಸೀಮೆಂಟ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಇನ್ನು ಮುಂದೆಯೂ ಏರಿಕೆಯಾಗಲಿದೆ. ಈ ಬೆಲೆ ಏರಿಕೆಯಿಂದ ಜನರನ್ನು ರಕ್ಷಣೆ ಮಾಡಲು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ನಮ್ಮ ಈ ಯೋಜನೆ ಮಹತ್ವ ಈಗ ಅರಿವಾಗುತ್ತಿದೆ” ಎಂದರು.

Share

Leave a comment

Leave a Reply

Your email address will not be published. Required fields are marked *