ದಾವಣಗೆರೆ: ನಗರದ ದೇವತೆಗಳಾದ ಶ್ರೀ ದುರ್ಗಾಂಬಿಕಾ ದೇವಿ ಹಾಗೂ ಶ್ರೀ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ ಕ್ರಮ ಕೈಗೊಂಡಿದೆ.
ಜಾತ್ರೆಯ ದಿನಗಳಾದ ಫೆಬ್ರವರಿ 22 ರಿಂದ ಫೆಬ್ರವರಿ 25 ರವರೆಗೆ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದೇವಸ್ಥಾನದ ಸುತ್ತಮುತ್ತಲ 500 ಮೀಟರ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸರಬರಾಜನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು ಮತ್ತು ಭಕ್ತಾದಿಗಳು ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಸಹಕರಿಸಲು ಕೋರಲಾಗಿದೆ.





Leave a comment