SUDDIKSHANA KANNADA NEWS/ DAVANAGERE/ DATE_05-07_2025
ದಾವಣಗೆರೆ: ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡುವ ಕೆಲಸದಲ್ಲಿ ದಾವಣಗೆರೆ ಜಿಲ್ಲೆಯ ಪ್ರಥಮ ಸ್ಥಾನದಲ್ಲಿದೆ. ಪಹಣಿಯೊಂದಿಗೆ ಆಧಾರ್ ಜೋಡಣೆಯಲ್ಲಿಯು ಮೊದಲ ಸ್ಥಾನದಲ್ಲಿದ್ದು ಅಧಿಕಾರಿಗಳು ತಂಡವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರ ಸ್ವಾಮಿ ಪ್ರಶಂಸೆ ವ್ಯಕ್ತಪಡಿಸಿದರು.
ಈ ಸುದ್ದಿಯನ್ನೂ ಓದಿ: ಭದ್ರಾ ಡ್ಯಾಂ (Bhadra Dam)ಗೆ 21,180 ಕ್ಯೂಸೆಕ್ ಒಳಹರಿವು: ಡ್ಯಾಂ ಭರ್ತಿಗೆ 17.5 ಅಡಿ ಬರಬೇಕಷ್ಟೇ!
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ ಗ್ರಾಮದಿಂದ 25 ಸಾವಿರ ಜನರಿಗೆ ಹಕ್ಕುಪತ್ರ ನೀಡಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 104 ಕಂದಾಯ ಗ್ರಾಮಗಳನ್ನು ರಚನೆ ಮಾಡುವ ಮೂಲಕ ಮನೆಗಳ ಹಕ್ಕುಪತ್ರ ನೀಡಲಾಗಿದೆ. ಇನ್ನೂ 200 ಕಂದಾಯ ಗ್ರಾಮಗಳನ್ನು ತೆಗೆದುಕೊಂಡಿದ್ದು ಒಟ್ಟು 25 ಸಾವಿರ ಜನರಿಗೆ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.
ದರಖಾಸ್ತು ಪೋಡಿ; ದರಖಾಸ್ತು ಪೋಡಿ ಅಭಿಯಾನದ ಮೂಲಕ ಒಟ್ಟುಗೂಡಿದ್ದ ಪಹಣಿಗಳನ್ನು ಬೇರ್ಪಡಿಸಲಾಗುತ್ತಿದೆ. ಈಗಾಗಲೇ 2 ಸಾವಿರ ದರಖಾಸ್ತು ಪೋಡಿ ಮೂಲಕ ಪ್ರತ್ಯೇಕ ಪಹಣಿ ವಿಂಗಡಿಸಲಾಗಿದೆ. ಇನ್ನೂ 5 ರಿಂದ 6 ಸಾವಿರ ಪಹಣಿಯನ್ನು ಒಟ್ಟುಗೂಡಿಸಿ ಬೇರ್ಪಡಿಸಲಾಗುತ್ತದೆ ಎಂದರು.