Home ದಾವಣಗೆರೆ ದಾವಣಗೆರೆ GTTCಯಲ್ಲಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ: ಉದ್ಯೋಗದ ಜತೆಗೆ ಶಿಷ್ಯವೇತನ ಸೌಲಭ್ಯ!
ದಾವಣಗೆರೆಉದ್ಯೋಗ ವಾರ್ತೆಬೆಂಗಳೂರು

ದಾವಣಗೆರೆ GTTCಯಲ್ಲಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ: ಉದ್ಯೋಗದ ಜತೆಗೆ ಶಿಷ್ಯವೇತನ ಸೌಲಭ್ಯ!

Share
ದಾವಣಗೆರೆ
Share

ದಾವಣಗೆರೆ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹರಿಹರದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ತಂತ್ರಜ್ಞಾನ ತರಬೇತಿಗಳ ಸಂಸ್ಥೆಗಳಿಗೆ ನೆರವು ಯೋಜನೆಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಮೂಲಕ 16 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ,  ಯುವತಿಯರಿಗಾಗಿ ಉದ್ಯೋಗಾವಕಾಶ ಕಲ್ಪಿಸಲು ಉಚಿತ ತರಬೇತಿಗಳನ್ನು ಆಯೋಜಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿರುತ್ತದೆ.

ಎಸ್.ಎಸ್.ಎಲ್.ಸಿ., ಪಿ.ಯು.ಸಿ,  ಐ.ಟಿ.ಐ , ಡಿಪ್ಲೋಮ, ಬಿ.ಇ, ಮತ್ತು ಯಾವುದೇ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಸಿಎನ್‍ಸಿ ಪ್ರೋಗ್ರಾಮರ್, ಕನ್ವೆನ್ಷನಲ್ ಟರ್ನರ್, ಮಿಲ್ಲಿಂಗ್ ಮಷಿನ್, ಸರ್ಫೇಸ್ ಗ್ರೈಂಡರ್ ಮಷಿನ್ ಅಪರೇಟರ್, ಡಿಸೈನ್, ಪ್ರೊಡಕ್ಷನ್ ಇಂಜಿನಿಯರ್, ಟೂಲ್ ರೂಮ್ ಮಷಿನಿಷ್ಟ್, ಟೂಲ್ ಅಂಡ್ ಡೈ ಮೇಕರ್ ಅಲ್ಪಾವಧಿ ತರಬೇತಿಗಳನ್ನು ಉಚಿತವಾಗಿ ನೀಡಲಾಗುವುದು. ಈ ತರಬೇತಿಯ ಅವಧಿಯಲ್ಲಿ ಶಿಷ್ಯವೇತನ ನೀಡಲಾಗುವುದು. ಹಾಗೂ ತರಬೇತಿ ಮುಗಿದ ನಂತರ ಉದ್ಯೋಗಾವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ. ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, 22 ಸಿ & ಡಿ ಕೆಐಎಡಿಬಿ , ಇಂಡಸ್ಟ್ರಿಯಲ್ ಏರಿಯ ಹರ್ಲಾಪುರ, ಕೆಎಸ್‍ಆರ್‍ಟಿಸಿ ಡಿಪೋ ಹತ್ತಿರ ಹರಿಹರ, ಪೋನ್: 9743185553, 9164369670, ಸಂಪರ್ಕಿಸಬಹುದೆಂದು ಪ್ರಾಂಶುಪಾಲರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *