Home ಕ್ರೈಂ ನ್ಯೂಸ್ ದಾವಣಗೆರೆ-ಹರಿಹರದಲ್ಲಿ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರ ನಿಗಾ ಇಡುವ ಜೊತೆಗೆ ಕಠಿಣ ಕ್ರಮಕ್ಕೆ ಶಾಸಕ ಬಿ.ಪಿ. ಹರೀಶ್ ಆಗ್ರಹ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ದಾವಣಗೆರೆ-ಹರಿಹರದಲ್ಲಿ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರ ನಿಗಾ ಇಡುವ ಜೊತೆಗೆ ಕಠಿಣ ಕ್ರಮಕ್ಕೆ ಶಾಸಕ ಬಿ.ಪಿ. ಹರೀಶ್ ಆಗ್ರಹ!

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ಜಿಲ್ಲೆ ಹಾಗೂ ಹರಿಹರ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಜೂಜಾಟ, ಬೆಟ್ಟಿಂಗ್ ಸೇರಿದಂತೆ ಇತರೆ ಅಕ್ರಮ ಚಟುವಟಿಕೆಗಳು ವ್ಯಾಪಕವಾಗಿ ಹೆಚ್ಚುತ್ತಿರುವುದಕ್ಕೆ ಹರಿಹರ ಶಾಸಕ ಬಿ. ಪಿ. ಹರೀಶ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಕ್ರಮ ಚಟುವಟಿಕೆಗಳು ಯುವಜನತೆಯ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಸಾಮಾಜಿಕ ಸ್ವಾಸ್ಥ್ಯ ಕೆಡಿಸುತ್ತಿವೆ. ಪೊಲೀಸ್ ಇಲಾಖೆಯು ಇಂತಹ ದಂಧೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ನಿರಂತರ ವಿಶೇಷ ಕಾರ್ಯಾಚರಣೆ ನಡೆಸಬೇಕು. ಸಾರ್ವಜನಿಕರು ನೀಡುವ ದೂರು ಹಾಗೂ ಮಾಹಿತಿಗೆ ತ್ವರಿತವಾಗಿ ಸ್ಪಂದಿಸುವ ವ್ಯವಸ್ಥೆ ರೂಪಿಸಬೇಕು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಜೂನ್ 9ರಂದು ಹರಿಹರ ನಗರದ ಹೊರವಲಯದ ಪ್ರೊ. ಬಿ. ಕೃಷ್ಣಪ್ಪ ಭವನದ ಮೈತ್ರಿವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರೊ. ಕೆ.ಎಸ್. ಭಗವಾನ್ ಅವರು ಶ್ರೀರಾಮಚಂದ್ರನ ಕುರಿತು ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಸಾರ್ವಜನಿಕವಾಗಿ ತೀವ್ರವಾಗಿ ಖಂಡಿಸಲಾಗಿದೆ. “ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳು ತಮ್ಮ ಹೇಳಿಕೆಗಳಲ್ಲಿ ಜವಾಬ್ದಾರಿತನ ಹಾಗೂ ಸಂಯಮವನ್ನು ಪಾಲಿಸಬೇಕು. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸುವ ಹಕ್ಕಿದ್ದರೂ, ಅದು ಯಾವುದೇ ಸಮುದಾಯ ಅಥವಾ ಧರ್ಮದ ಭಾವನೆಗಳಿಗೆ ಧಕ್ಕೆ ತರುವಂತಿರಬಾರದು” ಎಂದು ಹೇಳಿದರು.

ಭಗವಾನ್ ಅವರ ಇಂತಹ ವಿವಾದಾತ್ಮಕ ಮಾತುಗಳು ಸಮಾಜದಲ್ಲಿ ಅನಗತ್ಯ ಗೊಂದಲ ಮತ್ತು ಭಾವನಾತ್ಮಕ ಉದ್ವಿಗ್ನತೆಯನ್ನು ಸೃಷ್ಟಿಸುತ್ತವೆ. ಪರಸ್ಪರ ಗೌರವ ಹಾಗೂ ಸಾಮಾಜಿಕ ಸೌಹಾರ್ದತೆಯನ್ನು ಕಾಪಾಡುವುದು ಪ್ರತಿಯೊಬ್ಬರ
ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಪ್ರೊ. ಕೆ.ಎಸ್. ಭಗವಾನ್ ಹೇಳಿಕೆ ಖಂಡಿಸಿದ ಕೆ.ಎಸ್. ಉಗ್ರಪ್ಪ ನಿಲುವಿಗೆ ಬೆಂಬಲ

ಶ್ರೀರಾಮನ ಕುರಿತಾದ ಪ್ರೊ. ಕೆ.ಎಸ್. ಭಗವಾನ್ ಅವರ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ವಕ್ತಾರರಾದ ಕೆ.ಎಸ್. ಉಗ್ರಪ್ಪ ಅವರು ಖಂಡಿಸಿರುವುದನ್ನು ಸ್ವಾಗತಿಸುತ್ತೇನೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಪರಸ್ಪರ ಗೌರವವನ್ನು ಕಾಪಾಡುವ
ನಿಲುವನ್ನು ಪಕ್ಷಾತೀತವಾಗಿ ಎಲ್ಲ ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕ ವ್ಯಕ್ತಿಗಳು ಅನುಸರಿಸಬೇಕಿದೆ. ಸಾರ್ವಜನಿಕ ಬದುಕಿನಲ್ಲಿರುವವರ ಮಾತುಗಳು ಸಮಾಜದ ಮೇಲೆ ಆಳವಾದ ಪರಿಣಾಮ ಬೀರುವುದರಿಂದ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಮಾತನಾಡಬೇಕು. ಇಂತಹ ವಿವಾದಾತ್ಮಕ ಹೇಳಿಕೆಗಳ ಬದಲಿಗೆ ರಚನಾತ್ಮಕ ಚರ್ಚೆಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಮತ್ತು ದಾವಣಗೆರೆ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವನಗೌಡ ಪಾಟೀಲ್ ಹಾಜರಿದ್ದರು.

Share

Leave a comment

Leave a Reply

Your email address will not be published. Required fields are marked *