Home ದಾವಣಗೆರೆ ದಾವಣಗೆರೆ ಆರೋಗ್ಯ ಇಲಾಖೆಯ ವಿವಿಧ ಗುತ್ತಿಗೆ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ದಾವಣಗೆರೆಬೆಂಗಳೂರು

ದಾವಣಗೆರೆ ಆರೋಗ್ಯ ಇಲಾಖೆಯ ವಿವಿಧ ಗುತ್ತಿಗೆ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

Share
ದಾವಣಗೆರೆ
Share

ದಾವಣಗೆರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಆಗಸ್ಟ್ 4 ರಂದು ವಿವಿಧ ಹುದ್ದೆಗಳಿಗೆ ನಡೆದ ಗುತ್ತಿಗೆ ಆಧಾರದ ನೇಮಕಾತಿ ಸಂದರ್ಶನದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ.

ಫಾರ್ಮಸಿ ಅಧಿಕಾರಿ ಹಾಗೂ ಶುಶ್ರೂಷಾಧಿಕಾರಿ ಅಭ್ಯರ್ಥಿಗಳ ರೋಸ್ಟರ್ ಪಟ್ಟಿ ಮತ್ತು ಕಿರಿಯ ಪ್ರಯೋಗಶಾಲೆ ತಾಂತ್ರಿಕ ಅಧಿಕಾರಿ ಅಭ್ಯರ್ಥಿಗಳ ಅಂಕಗಳ ವಿವರ ಒಳಗೊಂಡ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯನ್ನು ದಾವಣಗೆರೆಯ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ವೀಕ್ಷಿಸಬಹುದಾಗಿದೆ.

ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಸೆಪ್ಟೆಂಬರ್ 2 ರೊಳಗಾಗಿ ತಮ್ಮ ಆಕ್ಷೇಪಣಾ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles