Home ದಾವಣಗೆರೆ ದಾವಣಗೆರೆ ಹೋಮ್ ಸ್ಟೇ ನೋಂದಣಿ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ದಂಡ ಮತ್ತು ಜೈಲು ಶಿಕ್ಷೆಯ ಎಚ್ಚರಿಕೆ!
ದಾವಣಗೆರೆಬೆಂಗಳೂರುವಾಣಿಜ್ಯ

ದಾವಣಗೆರೆ ಹೋಮ್ ಸ್ಟೇ ನೋಂದಣಿ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ದಂಡ ಮತ್ತು ಜೈಲು ಶಿಕ್ಷೆಯ ಎಚ್ಚರಿಕೆ!

Share
ದಾವಣಗೆರೆ
Share

ದಾವಣಗೆರೆ: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಪ್ರವಾಸಿಗರ ಸುರಕ್ಷತೆ ಮತ್ತು ಗುಣಮಟ್ಟದ ಸೇವೆಯ ದೃಷ್ಟಿಯಿಂದ ಎಲ್ಲಾ ಹೋಮ್ ಸ್ಟೇಗಳು ಪ್ರವಾಸೋದ್ಯಮ ಇಲಾಖೆಯ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

ನೋಂದಣಿ ಪತ್ರವಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಮಾಲೀಕರು ಕೂಡಲೇ ಗ್ರಾಮ ಪಂಚಾಯಿತಿಯಿಂದ ನಿರಾಕ್ಷೇಪಣಾ ಪತ್ರ, ಇ-ಖಾತಾ ಅಥವಾ ಪಹಣಿ, ಪೊಲೀಸ್ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ, ತಹಶೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ , ಮಾಲೀಕರ ಆಧಾರ್ ಕಾರ್ಡ್ ಮತ್ತು ಭಾವಚಿತ್ರ, ಹೋಮ್ ಸ್ಟೇ ಯೋಜನೆಯ ಛಾಯಾಚಿತ್ರಗಳ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು.

ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಕಾಯ್ದೆ-2015″ ರ ಅಡಿಯಲ್ಲಿ ನೋಂದಣಿ ಪಡೆಯದ ಅನಧಿಕೃತ ಹೋಮ್ ಸ್ಟೇಗಳ ಚಟುವಟಿಕೆಗಳನ್ನು ಕೂಡಲೇ ಸ್ಥಗಿತಗೊಳಿಸಲು ಸೂಚಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿರುವುದು ಕಂಡುಬಂದಲ್ಲಿ, ಹತ್ತು ಸಾವಿರ ರೂಪಾಯಿಗಳವರೆಗೆ ಜುಲ್ಮಾನೆ.ಎರಡು ತಿಂಗಳವರೆಗೆ ಸಾದಾ ಸಜೆ ಅಥವಾ ದಂಡ ಮತ್ತು ಶಿಕ್ಷೆ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಕಾಯ್ದೆಯ ಉಪ ಕಂಡಿಕೆಗಳನ್ವಯ ದಂಡನೆ ವಿಧಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಹಾಗೂ ಹೋಮ್ ಸ್ಟೇ ಮಾಲೀಕರು ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಪಿ.ಬಿ. ರಸ್ತೆ, ದಾವಣಗೆರೆ-577002 ಅಥವಾ ದೂರವಾಣಿ ಸಂಖ್ಯೆ: 08192-230123 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಕಾವ್ಯ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *