ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ಬೆಣ್ಣೆನಗರಿಯಲ್ಲಿ ಅಂತಾರಾಷ್ಟ್ರೀಯ ಟೆನ್ನಿಸ್ ಪಂದ್ಯಾವಳಿ ಕಲರವ: ಅ. 22ಕ್ಕೆ ಚಾಲನೆ 29ಕ್ಕೆ ಮುಕ್ತಾಯ, ವಿಜೇತರಾದವರಿಗೆ ಸಿಗುವ ನಗದು ಬಹುಮಾನ ಎಷ್ಟು ಗೊತ್ತಾ…?

On: October 19, 2023 1:21 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:19-10-2023

ದಾವಣಗೆರೆ (Davanagere): ದಾವಣಗೆರೆಯಲ್ಲಿ ಅಕ್ಟೋಬರ್ 22 ರಿಂದ 29 ರವರೆಗೆ ಅಂತರಾಷ್ಟ್ರೀಯ ಟೆನ್ನಿಸ್ ಪಂದ್ಯಾವಳಿಗಳು ನಡೆಯಲಿವೆ. ವಿವಿಧ ದೇಶದ ಆಟಗಾರರು ಈ ಪಂದ್ಯಾವಳಿಗಳಲ್ಲಿ ಭಾಗವಹಿಸಲಿದ್ದಾರೆ.

Read Also This Story:

Bangalore: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಯಾವುದೇ ವೈಮನಸ್ಸು, ಕಿರಿಕಿರಿ ಇಲ್ಲ ನನ್ನ ಮೌನ ವೀಕ್ನೇಸ್ ಅಲ್ಲ: ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಜಿಲ್ಲಾಡಳಿತ ಮತ್ತು ಜಿಲ್ಲಾ ಟೆನ್ನಿಸ್ ಅಸೋಸಿಯೇಷನ್ ಆಶ್ರಯದಲ್ಲಿ ನಗರದ ಹೈಸ್ಕೂಲ್ ಮೈದಾನದಲ್ಲಿರುವ ಟೆನ್ನಿಸ್ ಕ್ಲಬ್ ಆಶಯದಲ್ಲಿ ದಾವಣಗೆರೆ ಟೆನ್ನಿಸ್ ಕೋರ್ಟ್ ನಡೆಯಲಿರುವ ಅಂತರಾಷ್ಟ್ರೀಯ ಟೆನ್ನಿಸ್ ಪಂದ್ಯಾವಳಿ ಕುರಿತು ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ದಾವಣಗೆರೆಯಲ್ಲಿ ನಡೆಯುತ್ತಿರುವ ಮೂರನೇ ಅಂತರಾಷ್ಟ್ರೀಯ ಟೆನ್ನಿಸ್ ಪಂದ್ಯಾವಳಿಯಾಗಿದೆ. ಈ ಪಂದ್ಯಾವಳಿಯಲ್ಲಿ ಅಮೇರಿಕಾ, ಸ್ವಿಡ್ಜರ್ ಲ್ಯಾಂಡ್, ಸ್ವೀಡನ್ ಹಾಗೂ ಆಸ್ಟ್ರೇಲಿಯಾ ಒಳಗೊಂಡಂತೆ ವಿಶ್ವದ 16 ರಿಂದ 19 ದೇಶದ ಆಟಗಾರರು ಭಾಗವಹಿಸಲಿದ್ದಾರೆ. ಅಕ್ಟೋಬರ್ 22 ಮತ್ತು 23 ರಂದು ನಡೆಯುವ ಅರ್ಹತಾ ಸುತ್ತಿನ ಪಂದ್ಯದಲ್ಲಿ 32 ಸ್ಪರ್ಧಾಳುಗಳು ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದು ಇಲ್ಲಿ ವಿಜಯಶಾಲಿಯಾದ 8 ಜನರನ್ನು ಮುಖ್ಯ ಪಂದ್ಯಾವಳಿಗೆ ಆಯ್ಕೆ ಮಾಡಲಾಗುತ್ತದೆ. ಮುಖ್ಯ ಪಂದ್ಯಾವಳಿಗೆ ನೇರವಾಗಿ 20 ಸ್ಪರ್ಧಿಗಳು ಹಾಗೂ ಅರ್ಹತಾ ಸುತ್ತಿನಿಂದ 8 ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂದರು.

ಅಕ್ಟೋಬರ್ 24 ರಂದು ಬೆಳಿಗ್ಗೆ 9 ಗಂಟೆಗೆ ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಅಂತರಾಷ್ಟ್ರೀಯ ಟೆನ್ನಿಸ್ ಪಂದ್ಯಾವಳಿಯ ಉದ್ಘಾಟನೆಯನ್ನು ನೆರವೇರಿಸುವರು. ಅಂತರಾಷ್ಟ್ರೀಯ ಟೆನ್ನಿಸ್ ಪಂದ್ಯಾವಳಿಯಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ 15 ಲಕ್ಷ ನಗದು ಬಹುಮಾನವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಉಪ ವಿಭಾಗಾಧಿಕಾರಿ ದುರ್ಗಾಶ್ರೀ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಆರ್ ಜಯಲಕ್ಷ್ಮಿಬಾಯಿ, ಟೆನ್ನಿಸ್ ಕ್ಲಬ್ ಅಧ್ಯಕ್ಷೆ ಡಾ. ಶ್ರೀಶೈಲ ಬ್ಯಾಡಗಿ, ಹಿರಿಯ ಟೆನ್ನಿಸ್ ತರಬೇತುದಾರ ಕೆ.ಪಿ ಚಂದ್ರಪ್ಪ, ರಘುನಾಥ್, ನಿಂಗಪ್ಪ, ಮೂರ್ತಿ ಉಪಸ್ಥಿತರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment