ದಾವಣಗೆರೆ: 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 7 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಎಫ್-16 ಎಸ್ ನಿಜಲಿಂಗಪ್ಪ ಫೀಡರ್ ನಿಜಲಿಂಗಪ್ಪ ಲೇಔಟ್, ದೇವರಾಜ್‌ಅರಸ್ ಲೇಔಟ್ ಎ ಬ್ಲಾಕ್, ವಿನಾಯಕರಸ್ತೆ, ಯಲ್ಲಮ್ಮ ನಗರ, ಶಾಂತಿ ನಗರ, ವಿನೋಬ ನಗರ 4ನೇ ಮೇನ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ವಿದ್ಯುತ್ ವ್ಯತ್ಯಯ:
66/11 ಕೆವಿ ಜಗಳೂರು ವಿವಿ ಕೇಂದ್ರದಲ್ಲಿ ಪರಿವರ್ತಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 7 ರಂದು ಬೆಳಿಗ್ಗೆ 10.30 ರಿಂದ ಸಂಜೆ 5 ಗಂಟೆಯವರೆಗೆ ಎಲ್ಲಾ ಕೆವಿ ಮಾರ್ಗಗಗಳ ವ್ಯಾಪ್ತಿಯಲ್ಲಿ ಬರುವ ಜಗಳೂರು ಟೌನ್ ಮತ್ತು ಎಲ್ಲಾ ಗ್ರಾಮಗಳ ಎನ್‌ಜೆವೈ ಅಂಡ್ ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಬೆಸ್ಕಾಂ ಸಿಬ್ಬಂದಿಯೊಂದಿಗೆ ಸಹಕರಿಸಬೇಕಾಗಿ ವಿನಂತಿಸಲಾಗಿದೆ.





Leave a comment