Home ಉದ್ಯೋಗ ವಾರ್ತೆ ಫೆ.22ಕ್ಕೆ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ; ದಾವಣಗೆರೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ
ಉದ್ಯೋಗ ವಾರ್ತೆದಾವಣಗೆರೆಬೆಂಗಳೂರು

ಫೆ.22ಕ್ಕೆ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ; ದಾವಣಗೆರೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ

Share
ದಾವಣಗೆರೆ
Share

ದಾವಣಗೆರೆ: ಫೆಬ್ರವರಿ 22 ರಂದು ನಡೆಯಲಿರುವ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಇಲಾಖೆಗಳ (ಬಿಡಿಎ, ಕೆಕೆಆರ್‌ಟಿಸಿ, ಕೆಎಸ್‌ಡಿಎಲ್, ತಾಂತ್ರಿಕ ಶಿಕ್ಷಣ ಇಲಾಖೆ ಇತ್ಯಾದಿ) ಖಾಲಿ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಡಳಿತ ಭವನದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯ ಪ್ರಮುಖಾಂಶಗಳು:

ಅಭ್ಯರ್ಥಿಗಳ ಸಂಖ್ಯೆ:

ಜಿಲ್ಲೆಯ ಒಟ್ಟು 4 ಕೇಂದ್ರಗಳಲ್ಲಿ 2,205 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷಾ ಸಮಯ:

ಬೆಳಿಗ್ಗೆ 10:30 ರಿಂದ 12:30 (ಪತ್ರಿಕೆ 1) ಮತ್ತು ಮಧ್ಯಾಹ್ನ 2:30 ರಿಂದ 4:30 (ಪತ್ರಿಕೆ 2).

ನಿಷೇಧಿತ ವಸ್ತುಗಳು:

ಮೊಬೈಲ್, ಸ್ಮಾರ್ಟ್ ವಾಚ್, ಬ್ಲೂಟೂತ್ ಸಾಧನಗಳು ಮತ್ತು ಕ್ಯಾಲ್ಕುಲೇಟರ್‌ಗಳಿಗೆ ಅವಕಾಶವಿಲ್ಲ. ನಿಯಮ ಉಲ್ಲಂಘಿಸಿದರೆ ಅಭ್ಯರ್ಥಿತ್ವ ರದ್ದುಪಡಿಸಿ ಡಿಬಾರ್ ಮಾಡಲಾಗುವುದು.

ಉಡುಪು:

ಅಭ್ಯರ್ಥಿಗಳು ತುಂಬು ತೋಳಿನ ಶರ್ಟ್ ಧರಿಸುವುದನ್ನು ನಿಷೇಧಿಸಲಾಗಿದೆ.

ನಿಷೇಧಾಜ್ಞೆ:

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಈ ವ್ಯಾಪ್ತಿಯ ಜೆರಾಕ್ಸ್ ಮತ್ತು ಸೈಬರ್ ಕೆಫೆಗಳನ್ನು ಮುಚ್ಚಲು ಆದೇಶಿಸಲಾಗಿದೆ.

ಪರೀಕ್ಷಾ ಕೇಂದ್ರಗಳು: ಮೋತಿ ವೀರಪ್ಪ ಪಿಯು ಕಾಲೇಜು, ರಾಜನಹಳ್ಳಿ ಸೀತಮ್ಮ ಸರ್ಕಾರಿ ಮಹಿಳಾ ಪಿಯು ಕಾಲೇಜು, ಬಾಲಕರ ಸರ್ಕಾರಿ ಪಿಯು ಕಾಲೇಜು ಮತ್ತು ಡಾ. ಶಾಮನೂರು ಶಿವಶಂಕರಪ್ಪ ಪಿಯು ಕಾಲೇಜು.

ಪರೀಕ್ಷಾ ಕೆಂದ್ರಗಳ ಸುತ್ತ 200 ಮೀ ನಿಷೇಧಿತ ಪ್ರದೇಶ:

ದಾವಣಗೆರೆ ನಗರದ 4 ಪರೀಕ್ಷಾ ಕೇಂದ್ರಗಳಲ್ಲಿ ಫೆ.22 ರಂದು ಕಲ್ಯಾಣ ಕರ್ನಾಟಕ ವೃಂದದ ವಿವಿಧ ಖಾಲಿ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ಘೋಷಿಸಿದ್ದು ಈ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಲು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಆದೇಶಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *