ದಾವಣಗೆರೆ: ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಕೇವಲ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಅಂದಾಜು 6,00,000 ರೂ. ಬೆಲೆಬಾಳುವ 55 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
24 ಗಂಟೆಯೊಳಗೆ ಕಾರ್ಯಾಚರಣೆ: ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಕಾರ್ಯಾಚರಣೆಗಿಳಿದ ಪೊಲೀಸರು, ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಚಿಕ್ಕಲವತ್ತಿ ಗ್ರಾಮದ ಪ್ರಿಯಾಂಕ. ಎಮ್ (23) ಎಂಬಾಕೆಯನ್ನು ದಸ್ತಗಿರಿ ಮಾಡಿದ್ದಾರೆ.
ಚಿನ್ನಾಭರಣ ವಶ: ಆರೋಪಿಯಿಂದ ಕಳವು ಮಾಡಲಾಗಿದ್ದ ಒಟ್ಟು 6,00,000 ರೂ. ಬೆಲೆಬಾಳುವ 55 ಗ್ರಾಂ ಬಂಗಾರದ ಆಭರಣಗಳನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳಲಾಗಿದೆ.
ಪೊಲೀಸ್ ಅಧಿಕಾರಿಗಳ ಶ್ಲಾಘನೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್.ಟಿ., ಹೆಚ್ಚುವರಿ ಎಸ್‌ಪಿ ಪರಮೇಶ್ವರ್.ಹೆಚ್ ಹಾಗೂ ಡಿವೈಎಸ್ಪಿ ಶರಣಬಸವರೇಷ್.ಬಿ. ಅವರ ಮಾರ್ಗದರ್ಶನದಲ್ಲಿ, ಕೆಟಿಜೆ ನಗರ ಠಾಣೆಯ ನಿರೀಕ್ಷಕ ಮೇಘರಾಜ್.ಎಂ.ವಿ. ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರೈಸಿದ್ದು, ಹಿರಿಯ ಅಧಿಕಾರಿಗಳು ಸಿಬ್ಬಂದಿಗಳನ್ನು ಶ್ಲಾಘಿಸಿದ್ದಾರೆ.





Leave a comment