Site icon Kannada News-suddikshana

ದಾವಣಗೆರೆ (Davanagere) ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅ.14 ರಂದು ಮದ್ಯ ಮಾರಾಟ ನಿಷೇಧ

SUDDIKSHANA KANNADA NEWS/ DAVANAGERE/ DATE:12-10-2023

ದಾವಣಗೆರೆ (Davanagere): ನಗರದ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ಹಿನ್ನೆಲೆಯಲ್ಲಿ ಅಕ್ಟೋಬರ್ 14ಕ್ಕೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

Read Also This Story:

ಅ. 14ಕ್ಕೆ ದಾವಣಗೆರೆ (Davanagere)ಯ ಹಿಂದೂಮಹಾಗಣಪತಿ ವಿಸರ್ಜನೆ: ಬೇರೆ ಕಡೆ ಬಸ್ ತಾತ್ಕಾಲಿಕ ನಿಲುಗಡೆಗೆ ಸೂಚನೆ

ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮದ್ಯ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಅಕ್ಟೋಬರ್ 14 ರಂದು ಬೆಳಗ್ಗೆ 6 ರಿಂದ ಮಧ್ಯ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಿಸಲಾಗಿದೆ. ಈ ವೇಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದು ಕಂಡು ಬಂದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ವಿ. ವೆಂಕಟೇಶ್ ಎಚ್ಚರಿಕೆ ನೀಡಿದ್ದಾರೆ.

Exit mobile version