SUDDIKSHANA KANNADA NEWS/ DAVANAGERE/ DATE:17-08-2023
ದಾವಣಗೆರೆ: ರಾಜ್ಯಾದ್ಯಂತ ಲೋಕಾಯುಕ್ತ (Lokayukta) ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ದಾವಣಗೆರೆಯಲ್ಲಿಯೂ ಲೋಕಾಯುಕ್ತ (Lokayukta) ದಾಳಿ ನಡೆದಿದ್ದು, ಚನ್ನಗಿರಿಯ ಆರ್ ಎಫ್ ಒ ಸತೀಶ್ ಬಲೆ ಬಿದ್ದಿದ್ದು, ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ. ಇನ್ನು ಬಿಬಿಎಂಪಿಯಲ್ಲಿ ಎಇಇ ಆಗಿ ಕೆಲಸ ನಿರ್ವಹಿಸುತ್ತಿರುವ ಹೆಚ್. ಭಾರತಿ ಅವರ ದಾವಣಗೆರೆಯ ಜಯನಗರ ನಿವಾಸದ ಮೇಲೂ ರೇಡ್ ಆಗಿದೆ.
ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ಕೆ. ಮಹೇಶ್ ಹಾಗೂ ಹೆಚ್. ಭಾರತಿ ದಂಪತಿಗೆ ಸೇರಿದ ದಾವಣಗೆರೆಯ ಮನೆಯಲ್ಲಿ ಒಂದು ಕೆ ಜಿ ಬಂಗಾರ, ಹದಿನೈದು ಲಕ್ಷ ರೂಪಾಯಿಗೂ ಹೆಚ್ಚು ಹಣ ಪತ್ತೆಯಾಗಿದೆ ಎಂದು ಲೋಕಾಯುಕ್ತ (Lokayukta) ಮೂಲಗಳು ತಿಳಿಸಿವೆ. ಬಿಬಿಎಂಪಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹೆಚ್. ಭಾರತಿ ಅವರು ದಾವಣಗೆರೆಯಲ್ಲಿಯೂ ಆಸ್ತಿ ಮಾಡಿರುವ ಕುರಿತಂತೆ ಮಾಹಿತಿ ಇದ್ದು, ಈ ಕುರಿತಂತೆ ಕೆಲ ದಾಖಲಾತಿಗಳು ಸಿಕ್ಕಿವೆ ಎನ್ನಲಾಗಿದೆ. ಆದ್ರೆ, ಅಧಿಕಾರಿಗಳು ಈ ವಿಚಾರ ದೃಢಪಡಿಸಿಲ್ಲ.
ಬೆಳಿಗ್ಗೆ ಆರು ಗಂಟೆಗೆ ಎರಡು ತಂಡಗಳಲ್ಲಿ ಬಂದ ಲೋಕಾಯುಕ್ತ (Lokayukta) ಅಧಿಕಾರಿಗಳು ಅಧಿಕಾರಿಗೆ ಶಾಕ್ ಕೊಟ್ಟಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿ ದಾಳಿ ನಡೆಸಲಾಗಿದೆ. ಭದ್ರಾವತಿ ಅರಣ್ಯ ಇಲಾಖೆಯ ಚನ್ನಗಿರಿಯ ವಲಯ ಅರಣ್ಯಾಧಿಕಾರಿಯಾಗಿ ಸತೀಶ್ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಆರು ವರ್ಷಗಳಿಂದಲೂ ಇಲ್ಲಿಯೇ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಹೊಳಲ್ಕೆರೆಗೆ ಅವರು ವರ್ಗಾವಣೆಯಾಗಿದ್ದರು. ಇಂದು ಹೊಳಲ್ಕೆರೆಯಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಆದ್ರೆ, ಲೋಕಾಯುಕ್ತ ದಾಳಿ ನಡೆದಿದ್ದು, ಈ ವೇಳೆ ನಗದು ಹಾಗೂ ಬಂಗಾರ, ಆಸ್ತಿಗೆ ಸಂಬಂಧಿತ ಪತ್ರಗಳು ಸಿಕ್ಕಿವೆ ಎಂದು ಮೂಲಗಳು ತಿಳಿಸಿವೆ.
ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಆಪ್ತ ವಲಯದಲ್ಲಿ ಆರ್ ಎಫ್ ಒ ಸತೀಶ್ ಗುರುತಿಸಿಕೊಂಡಿದ್ದರು. ಮಾತ್ರವಲ್ಲ, ಮಾಡಾಳ್ ವಿರೂಪಾಕ್ಷಪ್ಪ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಗಿರಿಯಿಂದ ಸ್ಪರ್ಧೆ ಮಾಡಿರಲಿಲ್ಲ, ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ ಪಕ್ಷೇತರರಾಗಿ ಕಣಕ್ಕಿಳಿದು ಸೋಲು ಕಂಡಿದ್ದರು. ಈ ಹಿನ್ನೆಲೆಯಲ್ಲಿ ಹೊಳಲ್ಕೆರೆಗೆ ವರ್ಗಾವಣೆ ತೆಗೆದುಕೊಂಡು ಹೋಗುತ್ತಿದ್ದರೋ ಅಥವಾ ಇಲಾಖೆಯೇ ವರ್ಗಾವಣೆ ಮಾಡಿತ್ತೋ ಎಂಬುದು ಸ್ಪಷ್ಟವಾಗಿಲ್ಲ.
ಈ ಸುದ್ದಿಯನ್ನೂ ಓದಿ:
Intelligence Dog : ಒಸಮಾ ಬಿನ್ ಲಾಡೆನ್ ಸಂಹಾರಕ್ಕೆ ಬಳಸಿದ್ದ ಶ್ವಾನ ದಾವಣಗೆರೆಯಲ್ಲಿ: ಅಪರಾಧಿಗಳಿಗೆ ನಡುಕ ಹುಟ್ಟಿಸಿರೋ ಚಾಣಾಕ್ಷ ಡಾಗ್ ಗೆ ಟ್ರೈನಿಂಗ್ ಹೇಗಿರುತ್ತೆ, ಆಹಾರ ಏನು, ಆಯಸ್ಸು ಎಷ್ಟು..? ಕುತೂಹಲಕಾರಿ ಸ್ಟೋರಿ ಇದು
ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ನಡೆಸಿದ್ದು, ಚಿತ್ರದುರ್ಗ, ದಾವಣಗೆರೆ ಸೇರಿ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಬೇಟೆಯಾಡಿದ್ದಾರೆ.
ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ ಕೆ.ಮಹೇಶ್ ಪತ್ನಿ ಬಿಬಿಎಂಪಿ ಎಇಇ ಹೆಚ್. ಭಾರತಿ ಮನೆ ಮೇಲೆ ದಾಳಿ ನಡೆದಿದೆ. ಲೋಕಾಯುಕ್ತ (Lokayukta) ಅಧಿಕಾರಿಗಳು ದಾವಣಗೆರೆಯ ಜಯನಗರದಲ್ಲಿರುವ ಮಹೇಶ್ ಅವರ ಮನೆ ಬಾಗಿಲನ್ನು ಬೆಳಿಗ್ಗೆಯೇ ತಟ್ಟಿದ್ದು, ಅಧಿಕಾರಿಗಳನ್ನು ನೋಡಿ ಮನೆಯಲ್ಲಿದ್ದವರು ಶಾಕ್ ಆಗಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಣ್ಣ ನೀರಾವರಿ ಇಲಾಖೆ, ಬೆಂಗಳೂರಿನ ಬಿಬಿಎಂಪಿ ಕಚೇರಿ ಮೇಲೂ ದಾಳಿ ನಡೆಯುವ ಸಾಧ್ಯತೆ ಇದೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ದೂರು ಬಂದ ಹಿನ್ನೆಲೆ ಲೋಕಾಯುಕ್ತ
ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.