ದಾವಣಗೆರೆ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಗ್ಯಾಸ್ ಪೆಟ್ರೂಲ್ ಮತ್ತು ಡಿಸೇಲ್ ಕೊರತೆಯಾಗಲಿದೆ ಎಂಬ ವದಂತಿಗಳು ಹರಡುತ್ತಿದ್ದು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗಬಾರದು. ಅನಗತ್ಯವಾಗಿ ಬುಕಿಂಗ್ ಮಾಡಬಾರದು, ಅಗತ್ಯವಿರುವಷ್ಟು ಗ್ಯಾಸ್ ಸಿಲಿಂಡರ್ ಲಭ್ಯವಿದೆ ಎಂದು ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರಸ್ವಾಮಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಪ್ರತಿದಿನ ಸರಾಸರಿ 9,427 ಸಿಲಿಂಡರ್ಗಳು ವಿತರಣೆಯಾಗುತ್ತಿವೆ. ವಾರಕ್ಕೆ ಮೊದಲು ಬುಕಿಂಗ್ ಸಂಖ್ಯೆ ಸಾಮಾನ್ಯವಾಗಿದ್ದರೂ, ವದಂತಿಗಳ ನಂತರ ಇದು ಐದು ಪಟ್ಟು ಹೆಚ್ಚಾಗಿ 46,355 ಕ್ಕೆ ಏರಿದೆ. ಇದು ಕೇವಲ ಜನರ ಆತಂಕದಿಂದ ಸೃಷ್ಟಿಯಾಗಿರುವ ಸಮಸ್ಯೆಯೇ ಹೊರತು ಗ್ಯಾಸ್ ಕೊರತೆಯಿಂದಲ್ಲ ಎಂದು ತಿಳಿಸಿದರು.
ಮುಂದಿನ 4-5 ದಿನಗಳಲ್ಲಿ ಎಲ್ಲಾ ಗ್ಯಾಸ್ ಸಿಲಿಂಡರ್ ಬುಕಿಂಗ್ಗಳನ್ನು ಸರಬರಾಜು ಮಾಡಲಾಗುವುದು ಮತ್ತು ಗ್ಯಾಸ್ ಏಜೆನ್ಸಿಗಳ ಮುಂದೆ ಅನಗತ್ಯವಾಗಿ ಸಾಲು ನಿಲ್ಲುವ ಅವಶ್ಯಕತೆಯಿಲ್ಲ, ಒಂದು ವೇಳೆ ಯಾರಾದರು ಗ್ಯಾಸ್ ಏಜೆನ್ಸಿಗಳ ಮುಂದೆ ಸಾಲು ನಿಂತು ಜನರಲ್ಲಿ ಆತಂಕ ಸೃಷ್ಠಿಸುವುದು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಈ ಸಂಬಂಧ ಸುಳ್ಳು ಸುದ್ದಿ ಹಬ್ಬಿಸುವುದು ಮಾಡಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅಡುಗೆ ಅನಿಲ (LPG) ಲಭ್ಯತೆ:
ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ತೊಂದರೆಯಿಲ್ಲ. ಬುಕಿಂಗ್ ಮಾಡಿದ ಆರು ದಿನಗಳೊಳಗೆ ಸಿಲಿಂಡರ್ ಪೂರೈಕೆಯಾಗಲಿದೆ. ವಾಣಿಜ್ಯ ಸಿಲಿಂಡರ್ ಮೇಲಿದ್ದ ನಿರ್ಬಂಧವನ್ನೂ ಸರ್ಕಾರ ತೆಗೆದುಹಾಕಿದ್ದು,
ಈಗ ಸುಲಭವಾಗಿ ಲಭ್ಯವಿದೆ.
ಹೊಸ ಬುಕಿಂಗ್ ನಿಯಮಗಳು:
ಸರ್ಕಾರವು ಸಿಲಿಂಡರ್ ಬುಕಿಂಗ್ಗೆ ಸಂಬಂಧಿಸಿದಂತೆ ಕೆಲವು ಹೊಸ ನಿಯಮಗಳನ್ನು ಜಾರಿಗೆ ತಂದಿದೆ.
14.2 ಕೆ.ಜಿ ಗೃಹ ಬಳಕೆ ಸಿಲಿಂಡರ್: ಒಂದು ಸಿಲಿಂಡರ್ ಹೊಂದಿರುವ ಗ್ರಾಹಕರು: 25 ದಿನಕ್ಕೊಮ್ಮೆ ಬುಕ್ ಮಾಡಬಹುದು. ಎರಡು ಸಿಲಿಂಡರ್ ಹೊಂದಿರುವವರು: 35 ದಿನಕ್ಕೊಮ್ಮೆ ಬುಕಿಂಗ್ ಮಾಡಲು ಅವಕಾಶವಿದೆ.
5 ಕೆಜಿ ಗೃಹ ಬಳಕೆ ಸಿಲಿಂಡರ್: ನಗರ ಪ್ರದೇಶದಲ್ಲಿ 9 ದಿನ ಹಾಗೂ ಗ್ರಾಮೀಣ ಪ್ರದೇಶದಲ್ಲಿ 16 ದಿನಕ್ಕೊಮ್ಮೆ ಅವಕಾಶ.
10 ಕೆಜಿ ಕಂಪೋಸಿಟ್ ಸಿಲಿಂಡರ್ : ನಗರ ಪ್ರದೇಶದಲ್ಲಿ 18 ದಿನ ಹಾಗೂ ಗ್ರಾಮೀಣ ಪ್ರದೇಶದಲ್ಲಿ 32 ದಿನಕ್ಕೊಮ್ಮೆ ಬುಕ್ ಮಾಡಬಹುದು
- 14.2 ಕೆಜಿ ಸಿಲಿಂಡರ್ ಮಿತಿ
- 14.2kg Cylinder Booking Limit
- Davanagere LPG Supply
- DAVANAGERE NEWS
- DC G.M. Gangadharaswamy
- Gas Shortage Rumors
- LPG Cylinder Booking Rules
- New Gas Rules Karnataka.
- ಅಡುಗೆ ಅನಿಲ ಕೊರತೆ ವದಂತಿ
- ಎಲ್ಪಿಜಿ ಸಿಲಿಂಡರ್ ಬುಕ್ಕಿಂಗ್ ನಿಯಮಗಳು
- ಗ್ಯಾಸ್ ಏಜೆನ್ಸಿ ನಿಯಮಗಳು.
- ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ
- ದಾವಣಗೆರೆ ಗ್ಯಾಸ್ ಪೂರೈಕೆ
- ದಾವಣಗೆರೆ ಸುದ್ದಿ





Leave a comment