ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ದಾವಣಗೆರೆಯಲ್ಲಿ ಡಿಸೆಂಬರ್ 23, 24ಕ್ಕೆ ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಮಹಾಸಭಾದ 24 ನೇ ಅಧಿವೇಶನ: ಎರಡು ದಿನಗಳ ಕಾಲ ಆಯೋಜಿಸಲು ನಿರ್ಧರಿಸಿದ್ಯಾಕೆ…?

On: October 6, 2023 11:22 AM
Follow Us:
VEERASHAIVA LINGAYATHA MAHA ADHIVESHANA
---Advertisement---

SUDDIKSHANA KANNADA NEWS/ DAVANAGERE/ DATE:06-10-2023

ದಾವಣಗೆರೆ (Davanagere): ನಗರದ ಬಾಪೂಜಿ ಎಂಬಿಎ ಕಾಲೇಜು ಮೈದಾನದಲ್ಲಿ ಡಿಸೆಂಬರ್ 23 ಮತ್ತು 24 ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24 ನೇ ಮಹಾ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ಈ ಬಾರಿ ರಾಜ್ಯದಲ್ಲಿ ಬರ ಇರುವುದರಿಂದ ಮೂರು ದಿನಗಳ ಅಧಿವೇಶನವನ್ನು ಎರಡು ದಿನಗಳ ಮಾತ್ರ ನಡೆಸಲು ತೀರ್ಮಾನಿಸಲಾಗಿದೆ.

ಈ ಸುದ್ದಿಯನ್ನೂ ಓದಿ: 

Shamanuru Shivashankarappa: ನಾನು ಯಾವ ಬಾಂಬ್ ಹಾಕಿಲ್ಲ, ಯಾವ ಹೈಕಮಾಂಡ್ ಸೂಚನೆಯೂ ಇಲ್ಲ, ಸಿಎಂ ಜೊತೆ ಮಾತನಾಡಿದ ಸೀಕ್ರೆಟ್ ಬಹಿರಂಗವಾಗಿ ಹೇಳಲು ಆಗಲ್ಲ: ಶಾಮನೂರು ಶಿವಶಂಕರಪ್ಪ

ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪರ ಅಧ್ಯಕ್ಷತೆಯಲ್ಲಿ ಬಾಪೂಜಿ ಎಂಬಿಎ ಕಾಲೇಜಿನಲ್ಲಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಅಧಿವೇಶನದ ಪೂರ್ವಭಾವಿ ಸಭೆಯಲ್ಲಿ ಸಮಾಲೋಚನೆ
ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ.

ಸಭೆಯ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಹಾಗೂ ಸಚಿವ ಈಶ್ವರ್ ಖಂಡ್ರೆ ಅವರು, ಈ ಅಧಿವೇಶನದಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ. ಸುತ್ತೂರು, ಸಿದ್ದಗಂಗಾ ಶ್ರೀ ಸೇರಿದಂತೆ ವೀರಶೈವ ಲಿಂಗಾಯತ ಸಮಾಜದ ಎಲ್ಲಾ ಶ್ರೀಗಳಗೂ ಆಹ್ವಾನ ನೀಡಲಾಗುವುದು. ದೇಶ ಮಾತ್ರವಲ್ಲ, ವಿದೇಶದಲ್ಲಿರುವವರಿಗೂ ಅಧಿವೇಶನಕ್ಕೆ ಆಹ್ವಾನ ನೀಡಲಾಗುವುದು. ಜಾಗತಿಕ ವೀರಶೈವ ಲಿಂಗಾಯತ ಸಮಾಜ ಸೇರಿದಂತೆ ಅವ್ರು ಇವ್ರು ಅಂತೇನಿಲ್ಲ. ಸಮಾಜದ ಎಲ್ಲರನ್ನೂ ಕರೆಯುತ್ತೇವೆ. ವೀರಶೈವ ಲಿಂಗಾಯತರೆಲ್ಲರೂ ಸೇರಬೇಕೆಂಬ ಆಶಯವಿಟ್ಟುಕೊಂಡು ಈ ಅಧಿವೇಶನ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಪ್ರತಿ ಐದು ವರ್ಷಕ್ಕೊಮ್ಮೆ ಮಹಾ ಅಧಿವೇಶನ ನಡೆಯುತ್ತದೆ. ವಿಶ್ವದಲ್ಲಿನ ವೀರಶೈವ ಲಿಂಗಾಯತ ಸಮುದಾಯದವರನ್ನು ಒಗ್ಗೂಡಿಸಲು ಈ ಕಾರ್ಯಕ್ರಮ ನಡೆಸಲಾಗುತ್ತದೆ. ವಿವಿಧ ಮಠಾಧೀಶರು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರಿಗೆ
ಸನ್ಮಾನ ಮಾಡಲಾಗುವುದು. ವೇದಿಕೆ, ಹಣಕಾಸು, ದಾಸೋಹ, ಮೆರವಣಿಗೆ, ಸಾರಿಗೆ ಸೇರಿದಂತೆ ವಿವಿಧ ಸಮಿತಿಗಳ ರಚನೆ ಮಾಡಿ ಅಧಿಕಾರ ಕೊಡಲಾಗಿದೆ. ಮಹಿಳಾ ಘಟಕವೂ ಕಾರ್ಯ ನಿರ್ವಹಿಸಲಿದೆ. ಈ ಬಾರಿ ಯುವ, ಮಹಿಳಾ, ಯುವ, ರೈತ ಅಧಿವೇಶನ ನಡೆಯಲಿದ್ದು, ವೀರಶೈವ ಲಿಂಗಾಯತ ಸಮುದಾಯವು ನಡೆದುಕೊಂಡ ಬಂದ ರೀತಿ, ಎದುರಿಸುತ್ತಿರುವ ಸಂಕಷ್ಟಗಳು, ಮುಂದೆ ಏನಾಗಬೇಕು, ಈ ಹಿಂದೆ ಏನಾಗಿದೆ ಎಂಬ ವಿಚಾರ ಸೇರಿದಂತೆ ಜ್ವಲಂತ ಸಮಸ್ಯೆಗಳ ಕುರಿತಂತೆ ಬೆಳಕು ಚೆಲ್ಲಲು ಯಾವ ರೀತಿಯಲ್ಲಿ ಗೋಷ್ಠಿಗಳನ್ನು ಆಯೋಜನೆ ಮಾಡಬೇಕು ಎಂಬ ಕುರಿತಂತೆಯೂ ಸಮಾಲೋಚನೆ ನಡೆಸಲಾಯಿತು ಎಂದು ಮಾಹಿತಿ ನೀಡಿದರು.

ಅಧಿವೇಶನದಲ್ಲಿ ಕೆಲವು ನಿರ್ಣಯಗಳನ್ನು ಅಂಗೀಕಾರ ಮಾಡಿ, ಗೊತ್ತುವಳಿ ಮಂಡನೆ ಮಾಡುತ್ತೇವೆ. ಇದನ್ನು ರಾಜ್ಯ ಸರ್ಕಾರಕ್ಕೆ ನೀಡುತ್ತೇವೆ. ಈ ಹಿಂದೆ ನಡೆದ ಮಹಾ ಅಧಿವೇಶನಗಳಲ್ಲಿ ತೆಗೆದುಕೊಂಡ ನಿರ್ಣಯಗಳ ಪೈಕಿ ಕೆಲವು ಅನುಷ್ಠಾನಕ್ಕೆ ಬಂದಿದ್ದರೆ, ಮತ್ತೆ ಕೆಲವು ಅನುಷ್ಠಾನಕ್ಕೆ ಬಂದಿಲ್ಲ. ಈ ಕುರಿತಂತೆಯೂ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಹೇಳಿದರು.

ಕಳೆದ ವರ್ಷ 24 ನೇ ಮಹಾ ಅಧಿವೇಶನ ನಡೆಯಬೇಕಿತ್ತು. ಕೊರೊನಾ ಸೋಂಕು ಹಾಗೂ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗುವ ಕಾರಣದಿಂದ ಅಧಿವೇಶನ ನಡೆಸಲು ಆಗಲಿಲ್ಲ. ಈ ಕಾರಣಕ್ಕೆ ಮುಂದೂಡಲಾಗಿತ್ತು. ಡಿಸೆಂಬರ್ 23 ಮತ್ತು 24ರಂದು ಆಯೋಜಿಸಲಾಗಿದ್ದು, ಸಮಸ್ತ ವೀರಶೈವ ಲಿಂಗಾಯತರಿಗೆ ಭಾಗವಹಿಸಲು ಆಹ್ವಾನ ಮಾಡಲಾಗುವುದು. ಪಕ್ಷಾತೀತವಾಗಿ ಎಲ್ಲಾ ಪಕ್ಷಗಳಲ್ಲಿರುವ ವೀರಶೈವ ಲಿಂಗಾಯತ ಸಮುದಾಯದ ಜನಪ್ರತಿನಿಧಿಗಳನ್ನು ಆಹ್ವಾನಿಸುತ್ತೇವೆ. ಯಾರು ಉದ್ಘಾಟನೆ ನೆರವೇರಿಸಬೇಕು, ಮುಖ್ಯ ಅತಿಥಿಗಳಾಗಿ ಯಾರ್ಯಾರು ಬರಬೇಕು ಎಂಬ ಕುರಿತಂತೆ ಇನ್ನು ಹದಿನೈದು ದಿನಗಳಲ್ಲಿ ಸಭೆ ನಡೆಸಿ ತೀರ್ಮಾನಿಸಲಾಗುವುದು. ವೀರಶೈವ ಲಿಂಗಾಯತ ಭವನ, ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿಕೆ ಸೇರಿದಂತೆ ಹತ್ತು ಹಲವು ಸಮಸ್ಯೆಗಳು ಇವೆ. ಇವುಗಳ ಕುರಿತಾಗಿಯೂ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ಎಲ್ಲಾ ಜಾತಿ, ಭಾಷೆ, ಸಮಾಜದವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತಿದೆ. ಬಸವಣ್ಣನವರ ಪ್ರೇರಣೆ ಪಡೆದು ಆಡಳಿತ ನಡೆಸುತ್ತಿದೆ. ಯಾವ ಜಾತಿಗೂ ತಾರತಮ್ಯ, ಕಡೆಗಣನೆ ಆಗಿಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ವತಿಯಿಂದ ಕರೆಯಲಾಗಿದ್ದ ವೀರಶೈವ ಲಿಂಗಾಯತ ಮಹಾ ಅಧಿವೇಶನದ ಪೂರ್ವಭಾವಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಶಾಸಕ ಶಾಮನೂರು ಶಿವಶಂಕರಪ್ಪರು ಲಿಂಗಾಯತ ಸಮುದಾಯದ ಅಧಿಕಾರಿಗಳ ಕಡೆಗಣನೆ ವಿಚಾರ ಕುರಿತಂತೆಯೂ ಪ್ರಸ್ತಾಪ ಆಗಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಹಂತದಲ್ಲಿ ಚರ್ಚೆಯಾಗಿದೆ. ಜಾತಿ ಗಣತಿ ಬಿಡುಗಡೆ ವಿಚಾರ ಸಂಬಂಧ ಅಂತಿಮ ತೀರ್ಮಾನಕ್ಕೆ ಬಂದಿಲ್ಲ ಎಂದು ತಿಳಿಸಿದರು.

ಸಭೆಯಲ್ಲಿ ರಾಷ್ಟ್ರೀಯ ಉಪಾಧ್ಯಕ್ಷರಾದ ಎಸ್. ತಿಪ್ಪಣ್ಣ, ಅಥಣಿ ವೀರಣ್ಣ, ಎಸ್. ಎಸ್. ಗಣೇಶ್, ಅಣಬೇರು ರಾಜಣ್ಣ, ರಾಷ್ಟ್ರೀಯ ಕಾರ್ಯದರ್ಶಿ ರೇಣುಕಾ ಪ್ರಸನ್ನ, ಶಂಕರ್ ಬಿದರಿ ಸೇರಿದಂತೆ ಬೇರೆ ರಾಜ್ಯದ ಪ್ರತಿನಿಧಿಗಳು, ಕೇಂದ್ರ ಸಮಿತಿ ಸದಸ್ಯರು, ಯುವ ಮುಖಂಡರು, ಮಹಿಳಾ ಘಟಕಗಳ ಅಧ್ಯಕ್ಷರು ಹಾಜರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment