Home ಉದ್ಯೋಗ ವಾರ್ತೆ ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಗುನ್ಯೂಸ್, ಫೆ. 23ಕ್ಕೆ ದಾವಣಗೆರೆಯಲ್ಲಿ ಬೃಹತ್ ಉದ್ಯೋಗ ಮೇಳ: ಭಾಗವಹಿಸಲಿವೆ 45ಕ್ಕೂ ಹೆಚ್ಚು ಕಂಪೆನಿಗಳು
ಉದ್ಯೋಗ ವಾರ್ತೆದಾವಣಗೆರೆಬೆಂಗಳೂರು

ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಗುನ್ಯೂಸ್, ಫೆ. 23ಕ್ಕೆ ದಾವಣಗೆರೆಯಲ್ಲಿ ಬೃಹತ್ ಉದ್ಯೋಗ ಮೇಳ: ಭಾಗವಹಿಸಲಿವೆ 45ಕ್ಕೂ ಹೆಚ್ಚು ಕಂಪೆನಿಗಳು

Share
ಉದ್ಯೋಗ
Share

ದಾವಣಗೆರೆ: ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23, 2026 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಸುವರ್ಣಾವಕಾಶ ಒದಗಿ ಬಂದಿದೆ.

ಮೇಳಕ್ಕೆ ಬರುವ ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಸಂಬಂಧ ಚರ್ಚಿಸಲು ಸಭೆ ನಡೆಸಲಾಗಿದೆ.

45ಕ್ಕೂ ಹೆಚ್ಚು ಕಂಪನಿಗಳು ಭಾಗಿ:

ಬೃಹತ್ ಉದ್ಯೋಗ ಮೇಳಕ್ಕಾಗಿ ಈಗಾಗಲೇ ಪೋರ್ಟಲ್ ಮೂಲಕ ನೋಂದಣಿ ಆರಂಭವಾಗಿದ್ದು, 45ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿವೆ. ಇನ್ನು ಸುಮಾರು 20 ಕಂಪನಿಗಳು ಬರುವ ಸಾಧ್ಯತೆ ಇದೆ.

ಇದರಲ್ಲಿ ಐಟಿ, ಮಾಸ್ಟರ್ ಡಿಗ್ರಿ, ಐಟಿಐ ಮತ್ತು ಎಸ್‌ಎಸ್‌ಎಲ್‌ಸಿ, ಪಿಯುಸಿ ಅಭ್ಯರ್ಥಿಗಳಿಗೆ ಐಟಿ ವಲಯ ಬ್ಯಾಂಕ್ ಕ್ಷೇತ್ರ, ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್, ಫಾರ್ಮಸಿಟಿಕಲ್ ಸೇರಿದಂತೆ ಇನ್ನು ಅನೇಕ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ನೀಡುವ ವಿವಿಧ ಕಂಪನಿಗಳು ಸೇರಿವೆ.

ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಕಾಲೇಜುಗಳಿಗೆ ಪತ್ರ ವ್ಯವಹಾರ ಮಾಡಿದ್ದು ಪ್ಲೇಸ್‌ಮೆಂಟ್ ಆಫೀಸರ್‌ಗಳ ಭೇಟಿ ಮಾಡಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ, ಪೋಸ್ಟರ್‌ಗಳು, ಜಿಂಗಲ್ಸ್ ಮತ್ತು ಸ್ವಚ್ಛ ಭಾರತ್ ವಾಹನಗಳ ಮೂಲಕ ವ್ಯಾಪಕ ಪ್ರಚಾರ ಮಾಡಲು ಕೈಗೊಳ್ಳಬೇಕು, ಸುಮಾರು 4,000 ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ, ಆದುದರಿಂದ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು, ವಿದ್ಯಾರ್ಥಿಗಳಿಗೆ ಲಘು ಉಪಹಾರ, ನೀರು, ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬುಲೆನ್ಸ್ ವ್ಯವಸ್ಥೆ, ವಿಶೇಷ ಬಸ್ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.

ಪ್ರಮುಖ ಮುಖ್ಯಾಂಶಗಳು:

ನೋಂದಣಿ:

ಈಗಾಗಲೇ 1,200 ಅಭ್ಯರ್ಥಿಗಳು ಪೋರ್ಟಲ್ ಮೂಲಕ ನೋಂದಾಯಿಸಿಕೊಂಡಿದ್ದು, ಸುಮಾರು 4,000 ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ.

ಕಂಪನಿಗಳು:

ಐಟಿ, ಬ್ಯಾಂಕಿಂಗ್, ಮಾರ್ಕೆಟಿಂಗ್, ಫಾರ್ಮಸಿ ಸೇರಿದಂತೆ ವಿವಿಧ ವಲಯದ 60ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ.

ಅರ್ಹತೆ:

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವೀಧರರಿಗೆ ಮುಕ್ತ ಅವಕಾಶವಿದೆ.

ಸೌಲಭ್ಯಗಳು:

ಅಭ್ಯರ್ಥಿಗಳಿಗೆ ಕುಡಿಯುವ ನೀರು, ಲಘು ಉಪಹಾರ, ವಿಶೇಷ ಬಸ್ ವ್ಯವಸ್ಥೆ ಮತ್ತು ತುರ್ತು ಚಿಕಿತ್ಸೆಗಾಗಿ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗುವುದು.

ಸಾಮಾಜಿಕ ಜಾಲತಾಣ, ಪೋಸ್ಟರ್‌ಗಳು ಮತ್ತು ಸ್ವಚ್ಛ ಭಾರತ್ ವಾಹನಗಳ ಮೂಲಕ ಜಿಲ್ಲೆಯಾದ್ಯಂತ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಅವರು ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾಧವ ವಿಠಲ್ ರಾವ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *