Home ದಾವಣಗೆರೆ ದಾವಣಗೆರೆ: ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ; ಜೂನ್ 30 ಕೊನೆ ದಿನ!
ದಾವಣಗೆರೆಬೆಂಗಳೂರು

ದಾವಣಗೆರೆ: ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ; ಜೂನ್ 30 ಕೊನೆ ದಿನ!

Share
ದಾವಣಗೆರೆ
Share

ದಾವಣಗೆರೆ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಹೊಸದಾಗಿ ಪ್ರವೇಶ ಬಯಸುವ ಪಿ.ಯು.ಸಿ, ಡಿಪ್ಲೋಮೋ ಹಾಗೂ ಐ.ಟಿ.ಐ ಕೋರ್ಸ್‌ನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮಾತ್ರ ಈ ಪ್ರವೇಶಾತಿ ಅನ್ವಯಿಸಲಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹತೆ ಮತ್ತು ಆದಾಯ ಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಮಿತಿ ರೂ. 2.50 ಲಕ್ಷಗಳ ಒಳಗಿರಬೇಕು.

ಅರ್ಜಿ ಸಲ್ಲಿಸುವ ವಿಧಾನ ಮತ್ತು ದಿನಾಂಕ: ಅರ್ಹ ಅಭ್ಯರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ಅಧಿಕೃತ ವೆಬ್‌ಸೈಟ್ https://shp.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಕೆಯು ಜೂನ್‌ 05 ರಿಂದ ಆರಂಭವಾಗಲಿದ್ದು, ಜೂನ್‌ 30, 2026 ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ವಿದ್ಯಾರ್ಥಿ ನಿಲಯಗಳ ಪ್ರವೇಶಾತಿ ಕುರಿತು ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಕಛೇರಿ ದೂರವಾಣಿ ಸಂಖ್ಯೆ: 08192-250022 ಅಥವಾ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಛೇರಿ ದೂರವಾಣಿ ಸಂಖ್ಯೆ: 08192-250066 ಅನ್ನು ಸಂಪರ್ಕಿಸಬಹುದಾಗಿದೆ.

Share

Leave a comment

Leave a Reply

Your email address will not be published. Required fields are marked *