ದಾವಣಗೆರೆ: ಜಿಲ್ಲೆಯ ಕೆಲ ಫಿಟ್‌ನೆಸ್ ಕ್ಲಬ್‌ಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಬಗ್ಗೆ ಮಾಹಿತಿ ದೊರೆತಿರುವ ಹಿನ್ನೆಲೆಯಲ್ಲಿ, ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್. ತೆಕ್ಕಣ್ಣವರ್ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗೃಹಕಚೇರಿಯಲ್ಲಿ ನಡೆದ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಫಿಟ್‌ನೆಸ್ ಕ್ಲಬ್‌ಗಳು, ಜಿಮ್‌ಗಳು, ವಾಣಿಜ್ಯ ಮಳಿಗೆಗಳು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಗಳಲ್ಲಿ ಸಿಸಿಟಿವಿ ವ್ಯವಸ್ಥೆ, ಸುರಕ್ಷತಾ ಕ್ರಮಗಳು ಹಾಗೂ ನಿಯಮಗಳ ಪಾಲನೆ ಕುರಿತು ಸಮಗ್ರ ಪರಿಶೀಲನೆ ನಡೆಸಬೇಕು ಎಂದು ನಿರ್ದೇಶಿಸಿದರು.
ಅಲ್ಲದೆ, ಸಂಬಂಧಪಟ್ಟ ಫಿಟ್‌ನೆಸ್ ಕ್ಲಬ್ ಹಾಗೂ ಜಿಮ್‌ಗಳ ಮಾಲೀಕರೊಂದಿಗೆ ಸಭೆ ನಡೆಸಿ ಮಹಿಳಾ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸಬೇಕು. ಮಹಿಳೆಯರ ಭದ್ರತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಬೇಕು ಎಂದು ತಿಳಿಸಿದರು.
ಕ್ಷೇತ್ರದಾದ್ಯಂತ ಮಹಿಳಾ ಸುರಕ್ಷತೆ ಕುರಿತು ವ್ಯಾಪಕ ಜಾಗೃತಿ ಅಭಿಯಾನ ಹಮ್ಮಿಕೊಳ್ಳುವ ಜೊತೆಗೆ, ಮಹಿಳೆಯರ ಸಹಾಯವಾಣಿ ‘ಅಕ್ಕಪಡೆ’ಯ ಕಾರ್ಯನಿರ್ವಹಣೆಯನ್ನು ಇನ್ನಷ್ಟು ಬಲಪಡಿಸಿ, ಅದರ ಪರಿಣಾಮಕಾರಿ ಕಾರ್ಯವೈಖರಿಯನ್ನು ಪರಿಶೀಲಿಸಿ ಅಗತ್ಯ ಸುಧಾರಣೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡದೆ, ಸಂಬಂಧಿತ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಅಧಿಕಾರಿಗಳಿಗೆ ನಿರ್ದೇಶಿಸಿದರು. ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವುದು ಆಡಳಿತ ಮತ್ತು ಪೊಲೀಸ್ ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದ್ದು, ಮಹಿಳೆಯರ ಭದ್ರತೆಗೆ ಸಂಬಂಧಿಸಿದ ಪ್ರತಿಯೊಂದು ದೂರಿಗೂ ತ್ವರಿತವಾಗಿ ಸ್ಪಂದಿಸುವಂತೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಸೂಚನೆ ನೀಡಿದರು.
- Akkapade Helpline Davanagere
- Davanagere News today.
- Dr. Prabha Mallikarjun
- Fitness Club Harassment Case
- Gym CCTV Rules Karnataka
- SP Shekar H Tekkannavar
- Women Safety Davanagere
- ಅಕ್ಕಪಡೆ ಸಹಾಯವಾಣಿ
- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
- ಡಾ. ಪ್ರಭಾ ಮಲ್ಲಿಕಾರ್ಜುನ್
- ದಾವಣಗೆರೆ ಜಿಮ್ ಸಿಸಿಟಿವಿ
- ದಾವಣಗೆರೆ ಸುದ್ದಿ
- ಫಿಟ್‌ನೆಸ್ ಕ್ಲಬ್ ಲೈಂಗಿಕ ದೌರ್ಜನ್ಯ
- ಮಹಿಳಾ ಸುರಕ್ಷತೆ





Leave a comment