Home ದಾವಣಗೆರೆ ದಾವಣಗೆರೆಗೆ ಸಿಗಲಿದೆಯಾ ಯುದ್ಧ ಟ್ಯಾಂಕ್, ಯುದ್ಧ ವಿಮಾನ? ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ಪ್ರಭಾ ಮಲ್ಲಿಕಾರ್ಜುನ್ ಸಲ್ಲಿಸಿದ ಮನವಿಯಲ್ಲೇನಿದೆ?
ದಾವಣಗೆರೆನವದೆಹಲಿಬೆಂಗಳೂರು

ದಾವಣಗೆರೆಗೆ ಸಿಗಲಿದೆಯಾ ಯುದ್ಧ ಟ್ಯಾಂಕ್, ಯುದ್ಧ ವಿಮಾನ? ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ಪ್ರಭಾ ಮಲ್ಲಿಕಾರ್ಜುನ್ ಸಲ್ಲಿಸಿದ ಮನವಿಯಲ್ಲೇನಿದೆ?

Share
ದಾವಣಗೆರೆ
Share

ದಾವಣಗೆರೆ/ನವದೆಹಲಿ: ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ಜಿಲ್ಲೆಯ ಹಿತದೃಷ್ಟಿಯಿಂದ ಎರಡು ಪ್ರಮುಖ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಸಲ್ಲಿಸಿದರು.

ದಾವಣಗೆರೆಯ ಅಮರ್ ಜವಾನ್ ಪಾರ್ಕ್‌ನಲ್ಲಿ ಸ್ಥಾಪಿಸಲು ಸೇವೆಯಿಂದ ನಿವೃತ್ತಿಗೊಳಿಸಲಾದ (ಡಿ-ಕಮಿಷನ್ಡ್) ಒಂದು ವಿಂಟೇಜ್ ಯುದ್ಧ ಟ್ಯಾಂಕ್ ಹಾಗೂ ಒಂದು ಯುದ್ಧ ವಿಮಾನ ಮಂಜೂರು ಮಾಡುವಂತೆ ಅವರು ಮನವಿ ಮಾಡಿದ್ದಾರೆ.

ಈ ಯೋಜನೆಯು ದೇಶಕ್ಕಾಗಿ ತ್ಯಾಗ ಮಾಡಿದ ವೀರ ಯೋಧರಿಗೆ ಶಾಶ್ವತ ಗೌರವ ಸಲ್ಲಿಸುವುದರ ಜೊತೆಗೆ, ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ದೇಶಭಕ್ತಿ ಮತ್ತು ಭಾರತೀಯ ಸಶಸ್ತ್ರ ಪಡೆಗಳ ಇತಿಹಾಸ ಹಾಗೂ ಕಾರ್ಯಚಟುವಟಿಕೆಗಳ ಕುರಿತು ಅರಿವು ಮೂಡಿಸಲು ಸಹಕಾರಿಯಾಗಲಿದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಇದರೊಂದಿಗೆ, ದಾವಣಗೆರೆಯಲ್ಲಿ ಜಿಲ್ಲಾ ಸೈನಿಕ ಮಂಡಳಿಯನ್ನು ಮರುಸ್ಥಾಪಿಸಿ, ಸಿಎಸ್‌ಡಿ ಮಳಿಗೆಯನ್ನು ಆರಂಭಿಸುವಂತೆ ಮತ್ತೊಂದು ಮನವಿ ಸಲ್ಲಿಸಿದ್ದಾರೆ. ಇದರಿಂದ ಮಾಜಿ ಸೈನಿಕರು, ವೀರ ನಾರಿಯರು ಹಾಗೂ ಅವರ ಕುಟುಂಬಗಳಿಗೆ ಅಗತ್ಯ ಕಲ್ಯಾಣ ಸೇವೆಗಳು, ಪಿಂಚಣಿ ಸಂಬಂಧಿತ ನೆರವು ಮತ್ತು ಸಿಎಸ್‌ಡಿ ಸೌಲಭ್ಯಗಳು ಜಿಲ್ಲೆಯಲ್ಲಿಯೇ ಸುಲಭವಾಗಿ ದೊರೆಯಲಿದ್ದು, ದೂರದ ಜಿಲ್ಲೆಗಳಿಗೆ ತೆರಳುವ ಅನಿವಾರ್ಯತೆ ತಪ್ಪಲಿದೆ ಎಂದು ಅವರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಈ ಎರಡೂ ಮನವಿಗಳಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ ಶೀಘ್ರ ಅನುಮೋದನೆ ನೀಡುವ ವಿಶ್ವಾಸವಿದೆ ಎಂದು ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *