ದಾವಣಗೆರೆ: ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಶೇಖರ್ ಹೆಚ್. ತೆಕ್ಕಣ್ಣನವರ್ ಅಧಿಕಾರ ವಹಿಸಿಕೊಂಡಿದ್ದಾರೆ. ವರ್ಗಾವಣೆಗೊಂಡ ಉಮಾ ಪ್ರಶಾಂತ್ ಅವರು ಅಧಿಕಾರ ಹಸ್ತಾಂತರಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಜಿಲ್ಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು. ಅಕ್ರಮ ಮರಳುಗಾರಿಕೆ, ಸ್ಮಗ್ಲಿಂಗ್ ಸೇರಿದಂತೆ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ. ದಾವಣಗೆರೆ ಜಿಲ್ಲಾ ಪೊಲೀಸರು ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಇದನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಹೇಳಿದರು.
ನೂತನ ಎಸ್ಪಿ ಹೇಳಿದ್ದೇನು?
ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಸಮರ
ಜಿಲ್ಲೆಯಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ:
ಅಕ್ರಮ ಮರಳುಗಾರಿಕೆ ಮತ್ತು ಸ್ಮಗ್ಲಿಂಗ್ ಸೇರಿದಂತೆ ಯಾವುದೇ ಕಾನೂನು ಬಾಹಿರ ಕೆಲಸಗಳಿಗೆ ಅವಕಾಶವಿಲ್ಲ.
ಅಕ್ರಮ ಚಟುವಟಿಕೆಗಳು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.
ಕಾನೂನು ಮತ್ತು ಸುವ್ಯವಸ್ಥೆ ಪಾಲನೆ
ಕಾನೂನು ಎಲ್ಲರಿಗೂ ಒಂದೇ: ಕಾನೂನು ಪಾಲನೆಯಲ್ಲಿ ಯಾವುದೇ ರೀತಿಯ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ತಮ್ಮ ಮೊದಲ ಆದ್ಯತೆ ಎಂದಿದ್ದಾರೆ.
ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರ ಸಂಪರ್ಕ
ಸಾರ್ವಜನಿಕರು ಮತ್ತು ರಾಜಕೀಯ ಜನಪ್ರತಿನಿಧಿಗಳ ಸಲಹೆಗಳನ್ನು ಸ್ವೀಕರಿಸಲಾಗುವುದು.
ಆದರೆ, ಅಂತಹ ಸಲಹೆಗಳು ಕೇವಲ ಜಿಲ್ಲೆಯ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಾತ್ರ ಇರಬೇಕು ಎಂದು ಮಿತಿಗಳನ್ನು ತಿಳಿಸಿದ್ದಾರೆ.
ಕಾನೂನು ಎಲ್ಲರಿಗೂ ಒಂದೇ. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ನಮ್ಮ ಜವಾಬ್ದಾರಿ. ಈ ಬಗ್ಗೆ ಹೆಚ್ಚು ಆಸಕ್ತಿ ವಹಿಸಿ ಶಾಂತಿ ನೆಲೆಸುವಂತೆ ಮಾಡಲಾಗುವುದು. ಸಾರ್ವಜನಿಕರು, ರಾಜಕೀಯ ಜನಪ್ರತಿನಿಧಿಗಳ ಸಲಹೆ ಸ್ವೀಕರಿಸುತ್ತೇವೆ. ಅದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಾತ್ರ ಎಂದರು.
ದಾವಣಗೆರೆ ನಗರದಲ್ಲಿ ಪೊಲೀಸರ ಮೇಲೆ ಹಲ್ಲೆಯಾಗಿರುವ ವಿಚಾರವನ್ನು ನಾನು ಸಹ ಮಾಧ್ಯಮದಲ್ಲಿ ನೋಡಿದ್ದೇನೆ. ಪ್ರಕರಣ ದಾಖಲಾಗಿ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಮುಂದಿನ ದಿನಗಳಲ್ಲಿ ತನಿಖೆಯಲ್ಲಿ ಯಾವುದೇ ರೀತಿಯಲ್ಲೂ
ಲೋಪದೋಷವಾಗದಂತೆ ನೋಡಿಕೊಳ್ಳಲಾಗುವುದು. ಪೊಲೀಸರ ಮೇಲೆ ನಡೆಸಿರುವುದು ಗಂಭೀರ ಪ್ರಕರಣ. ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದ ಎಂದ ಅವರು, ಪೊಲೀಸರಿಗೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಹೇಳಿದರು.
- Attack on Police Case
- Davanagere District Police
- Davanagere New SP
- Illegal Sand Mining
- Karnataka Police News
- Law and Order Davanagere
- Shekhar H Tekkannavar
- Uma Prashanth Transfer
- ಅಕ್ರಮ ಮರಳುಗಾರಿಕೆ ತಡೆ
- ಉಮಾ ಪ್ರಶಾಂತ್ ವರ್ಗಾವಣೆ
- ಕರ್ನಾಟಕ ಪೊಲೀಸ್
- ಕಾನೂನು ಮತ್ತು ಸುವ್ಯವಸ್ಥೆ
- ದಾವಣಗೆರೆ ಜಿಲ್ಲಾ ಪೊಲೀಸ್
- ದಾವಣಗೆರೆ ನೂತನ ಎಸ್ಪಿ
- ಪೊಲೀಸರ ಮೇಲೆ ಹಲ್ಲೆ
- ಶೇಖರ್ ಹೆಚ್ ತೆಕ್ಕಣ್ಣನವರ್





Leave a comment