ದಾವಣಗೆರೆ (Davanagere): ಪ್ರಸಕ್ತ ಸಾಲಿನ ಕ್ರೀಡಾ ಇಲಾಖೆಯಿಂದ ಪರಿಶಿಷ್ಠ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ 2022ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪ.ಜಾ ಹಾಗೂ ಪ.ಪಂ ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾಪಟುಗಳು ಅರ್ಜಿ ನಮೂನೆಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿರುವ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಸಲ್ಲಿಸಬೇಕು.
ಈ ಸುದ್ದಿಯನ್ನೂ ಓದಿ:
SUSPECT DEATH BIG EXCLUSIVE STORY: ಸಾವಿನ ಸುತ್ತ ಅನುಮಾನದ ಹುತ್ತ: ಅಮೆರಿಕಾದಲ್ಲಿ ಮೂವರು ಸಾವಿನ ಸುತ್ತ ಗಿರಕಿ ಹೊಡೆಯುತ್ತಿರುವ ಮೂರು ಕಾರಣಗಳು…!
ಅರ್ಜಿ ಸಲ್ಲಿಸಲು ಸೆಪ್ಟಂಬರ್ 5 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ, 08192 237480 ಸಂಪರ್ಕಿಸಲು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ:
ದಾವಣಗೆರೆ: ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಹಾಗೂ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಂದ 2023-24ನೇ ಸಾಲಿನ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿನ ಅರ್ಹ ಕ್ರೀಡಾಪಟುಗಳು ಅರ್ಜಿ ನಮೂನೆಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿರುವ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟಂಬರ್ 22 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ, 08192 237480 ಸಂಪರ್ಕಿಸಲು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.