ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರಿವು ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

On: June 16, 2023 12:06 PM
Follow Us:
Arji Ahvana
---Advertisement---

SUDDIKSHANA KANNADA NEWS/ DAVANAGERE/ DATE:16-06-2023

ದಾವಣಗೆರೆ (DAVANAGERE):  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿ (ನಿ) ಜಿಲ್ಲಾ ನಿಗಮದಿಂದ 2023-24 ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಿ.ಇ.ಟಿ, ನೀಟ್ ಪರೀಕ್ಷೆಗೆ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರಿವು ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮತೀಯ ಅಲ್ಪಸಂಖ್ಯಾತರಾದ ಮುಸ್ಲೀಂ, ಕ್ರಿಶ್ಚಿಯನ್, ಜೈನ್ಸ್, ಬೌದ್ಧರು, ಸಿಖ್ಖರು, ಪಾರ್ಸಿಗಳು ಹಾಗೂ ಆಂಗ್ಲೋ-ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ http://kmdconline.karnataka.gov.in ಮೂಲಕ ಅರ್ಜಿ ಭರ್ತಿಮಾಡಿ ಪ್ರಿಂಟ್ ಕಾಪಿಯನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 10 ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಕ್ಕೆ ಸಲ್ಲಿಸಬೇಕು.

ದಾಖಲೆಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳು ಭರಿಸಬೇಕಾದ ಬೋಧನಾ ಶುಲ್ಕಕ್ಕಾಗಿ ಅವರು ವ್ಯಾಸಂಗ ಮಾಡುವ ಕಾಲೇಜಿಗೆ ನಿಗಮದಿಂದ ಮಂಜೂರು ಮಾಡುವ ಸಾಲವನ್ನು ಮುಂಚಿತವಾಗಿ ನೇರವಾಗಿ ಹಣ ಪಾವತಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ, ಜಯದೇವ ಸರ್ಕಲ್ ಹತ್ತಿರ, ದಾವಣಗೆರೆ, ಫೋ: 01892-232349, ಮೊಬೈಲ್ ನಂ : 8277944215 ಗೆ ಸಂಪರ್ಕಿಸಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.

ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ:

2022-23ನೇ ಸಾಲಿನ ಪ್ರತಿಭಾವಂತ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.10,000 ರಂತೆ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 6 ನೇ ರಿಂದ 10 ನೇ ತರಗತಿಯ ಅರ್ಹ ಕ್ರೀಡಾಪಟುಗಳು ಅಧಿಕೃತ ಜಾಲತಾಣ :https:// sevasin dhuservices.karnataka.gov.in ಮೂಲಕ ಜುಲೈ.31ರ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.08192-237480 ಸಂಪರ್ಕಿಸಬಹುದೆಂದು ಕೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸುಚೇತನ ನೆಲವಿಗಿ ತಿಳಿಸಿದ್ದಾರೆ.

ಜಿಲ್ಲಾ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ತರಬೇತಿ:

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಿಂದ 2023-24 ನೇ ಸಾಲಿಗೆ ಆಡಳಿತ ನ್ಯಾಯಾಧಿಕರಣದಲ್ಲಿ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ತರಬೇತಿ ನೀಡಲು ಜೂನ್ 23 ರಿಂದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಜುಲೈ 24 ರೊಳಗಾಗಿ ಇಲಾಖಾ ವೆಬ್‍ಸೈಟ್ www.tw.kar.nic.in ಮೂಲಕ ಅರ್ಜಿ ಸಲ್ಲಿಸಿ ಮೂಲ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ: 45 ರಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.

Davanagere News, Davanagere Suddi, Davanagere Latest News

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment