ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: 5 ವರ್ಷಗಳ ಬಳಿಕ ಜಿಲ್ಲೆಯ ಶಾಸಕರು ಸಚಿವರಾಗಿ ಧ್ವಜಾರೋಹಣ ನೆರವೇರಿಸುವ ಸುದಿನ: ಕೆ. ಎಲ್. ಹರೀಶ್ ಬಸಾಪುರ

On: August 14, 2023 1:12 PM
Follow Us:
S. S. MALLIKARJUN
---Advertisement---

SUDDIKSHANA KANNADA NEWS/ DAVANAGERE/ DATE:14-08-2023

ದಾವಣಗೆರೆ (Davanagere): ಐದು ವರ್ಷಗಳ ನಂತರ ನಾಳೆ ಜಿಲ್ಲೆಯ ಶಾಸಕರೊಬ್ಬರು, ಜಿಲ್ಲಾ ಉಸ್ತುವಾರಿ ಸಚಿವರಾಗಿ ಧ್ವಜಾರೋಹಣ ನಡೆಸುವ ಸುದಿನ ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಕೆ. ಎಲ್. ಹರೀಶ್ ಬಸಾಪುರ ಹರ್ಷ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ನಾಳೆ ನಮ್ಮ ಜಿಲ್ಲೆಯ ಶಾಸಕರೊಬ್ಬರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಧ್ವಜಾರೋಹಣ ಮಾಡುವಂತಹ ಸಂದರ್ಭ ಬಂದಿರುವುದು ಸಂತಸದ ವಿಷಯ ಎಂದು ತಿಳಿಸಿದ್ದಾರೆ.

ಕೆ. ಎಲ್. ಹರೀಶ್ ಬಸಾಪುರ, ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲತಾಣ ಅಧ್ಯಕ್ಷ
ಕೆ. ಎಲ್. ಹರೀಶ್ ಬಸಾಪುರ, ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲತಾಣ ಅಧ್ಯಕ್ಷ

2013 ರಿಂದ 2018 ರವರೆಗೆ ನಮ್ಮ ಜಿಲ್ಲೆಯವರೇ ಆದ ಡಾ. ಶಾಮನೂರು ಶಿವಶಂಕರಪ್ಪನವರು ಹಾಗೂ ಎಸ್.ಎಸ್ ಮಲ್ಲಿಕಾರ್ಜುನ್ ರವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿ ಧ್ವಜಾರೋಹಣ ನೆರವೇರಿಸಿದ್ದರು, 2018 ರಲ್ಲಿ ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದ್ದರೂ ಸಹ, ಜಿಲ್ಲೆಯ ಯಾರನ್ನು ಸಚಿವರನ್ನಾಗಿ ಮಾಡದೇ ಇದ್ದಿದ್ದರಿಂದ ಬೇರೆ ಜಿಲ್ಲೆಯ ಸಚಿವರೇ ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿ ಧ್ವಜಾರೋಹಣ ನೆರವೇರಿಸುತ್ತಿದ್ದರು ಎಂದಿದ್ದಾರೆ.

2023ರಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ನಮ್ಮ ಜಿಲ್ಲೆಯ ಶಾಸಕರಾದ ಎಸ್.ಎಸ್. ಮಲ್ಲಿಕಾರ್ಜುನ್ ರವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಧ್ವಜಾರೋಹಣ ನೆರವೇರಿಸುತ್ತಿರುವುದು ಸಂತೋಷದ ವಿಷಯವಾಗಿದೆ ಎಂದು ಹರೀಶ್
ಬಸಾಪುರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment