SUDDIKSHANA KANNADA NEWS/ DAVANAGERE/ DATE: 07-09-2023
ದಾವಣಗೆರೆ(Davanagere): ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ರಾಷ್ಟ್ರೀಯ ತೋಟಗಾರಿಕ ಮಿಷನ್, ಯೋಜನೆಯಡಿ ಯಾಂತ್ರೀಕರಣ ಹಾಗೂ ಇತರ ಯೋಜನೆಗಳಡಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಾಗೂ ಇತರೆ ವರ್ಗದ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಸುದ್ದಿಯನ್ನೂ ಓದಿ:
ಮುಂಬೈ ಷೇರುಪೇಟೆ(Stock market)ಯಲ್ಲಿ ಮುಂದುವರೆದ ಏರಿಳಿತ : 19,600 ರ ಗಡಿ ದಾಟಿದ ನಿಫ್ಟಿ
ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿರುವ ಎಲ್ಲಾ ವರ್ಗದ ರೈತರು, ಸಹಾಯಧನ ಪಡೆಯಲು ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಚನ್ನಗಿರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಿಂದ ಪಡೆದು
ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಹಿಂದಿರುಗಿಸಬೇಕು.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.