ದಾವಣಗೆರೆ: ಜಿಲ್ಲೆಯ 220ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನದ ದಾಸ್ತಾನು ಪೂರಕವಾಗಿದೆ. ವದಂತಿಗಳಿಂದಾಗಿ ಜನರು ಪೆಟ್ರೋಲ್ ಬಂಕ್‌ಗಳ ಮುಂದೆ ಸಾಲು ನಿಲ್ಲುತ್ತಿರುವುದು ಕಂಡುಬಂದಿದ್ದು, ಇಂಧನ ಖಾಲಿಯಾಗುವ ಯಾವುದೇ ಭೀತಿ ಇಲ್ಲ, ಇನ್ನು ಐದು ತಿಂಗಳಿಗೆ ಆಗುವಷ್ಟು ಇಂಧನ ದಾಸ್ತಾನು ಇದೆ ಎಂದು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ಇಲ್ಲ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು: ಎಫ್‌ಐಆರ್ ಎಚ್ಚರಿಕೆ
ಸಮಾಜದಲ್ಲಿ ಅಶಾಂತಿ ಮತ್ತು ಅಭದ್ರತೆ ಮೂಡಿಸುವ ನಿಟ್ಟಿನಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ. “ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಎಫ್‌ಐಆರ್ ದಾಖಲಿಸಲಾಗುವುದು. ಪ್ರತಿಯೊಂದು ಪೋಸ್ಟ್ ಮೇಲೆ ನಮ್ಮ ಸೋಷಿಯಲ್ ಮೀಡಿಯಾ ವಿಂಗ್ ಕಣ್ಣಿಟ್ಟಿದೆ” ಎಂದು ಹೇಳಿದರು.
ದೇಶದಾದ್ಯಂತ ಇಂದೇ ಆಮದು ನಿಂತರೂ ಸಹ ಮುಂದಿನ ನಾಲ್ಕರಿಂದ ಐದು ತಿಂಗಳವರೆಗೆ ಇಂಧನ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮತ್ತು ಪ್ರಧಾನ ಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು.
ಬಂಕ್‌ಗಳಿಗೆ ಸೂಚನೆ:
ಯಾವುದೇ ಪೆಟ್ರೋಲ್ ಬಂಕ್‌ಗಳಲ್ಲಿ ಕ್ಯಾನು ಅಥವಾ ಟ್ಯಾಂಕ್‌ಗಳ ಮೂಲಕ ಅನಗತ್ಯವಾಗಿ ಇಂಧನ ಮಾರಾಟ ಮಾಡದಂತೆ ನಿರ್ದೇಶನ ನೀಡಲಾಗಿದೆ. ಜನರು ಆತಂಕದಿಂದ ಇಂಧನ ತುಂಬಿಸಿಕೊಳ್ಳುವ ಅಗತ್ಯವಿಲ್ಲ. ಸಾರ್ವಜನಿಕರು ಕೇವಲ ಸರ್ಕಾರ ಮತ್ತು ತೈಲ ಕಂಪನಿಗಳ (BPCL, HPCL, IOCL) ಅಧಿಕೃತ ಹೇಳಿಕೆಗಳನ್ನು ಮಾತ್ರ ನಂಬಬೇಕು. ಸುಖಾಸುಮ್ಮನೆ ಆತಂಕಕ್ಕೆ ಒಳಗಾಗಿ ಇಂಧನ ಸಂಗ್ರಹ ಮಾಡಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಬಯೋ ಗ್ಯಾಸ್ ಬಳಸಿ :
ಸಾರ್ವಜನಿಕರು ಅಡುಗೆ ಅನಿಲದ ಬಳಕೆಯನ್ನು ಮಿತವಾಗಿ ಬಳಸಬೇಕು ಹಾಗೂ ಪರ್ಯಾಯ ಇಂಧನವಾಗಿ ಜೈವಿಕ ಅನಿಲ (ಬೈಯೋ ಗ್ಯಾಸ್) ಬಳಕೆಗೆ ಹೆಚ್ಚಿನ ಒತ್ತು ನೀಡಬೇಕು ಇತ್ತೀಚಿನ ದಿನಗಳಲ್ಲಿ ಇಂಧನದ ಬಳಕೆ ಹೆಚ್ಚಾಗುತ್ತಿದ್ದು, ಗ್ರಾಹಕರು ಸಿಲಿಂಡರ್ ಗ್ಯಾಸ್ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ, ಸ್ವಾವಲಂಬಿಗಳಾಗಲು ಬೈಯೋ ಗ್ಯಾಸ್ ಘಟಕಗಳನ್ನು ಸ್ಥಾಪಿಸಿಕೊಳ್ಳುವುದು ಸೂಕ್ತವಾಗಿದೆ. ಈ ಮೂಲಕ ಪರಿಸರ ಸಂರಕ್ಷಣೆಯ ಜೊತೆಗೆ ಆರ್ಥಿಕ ಉಳಿತಾಯವನ್ನೂ ಮಾಡಬಹುದು. ಜೈವಿಕ ಅನಿಲ ಘಟಕಗಳನ್ನು ಅಳವಡಿಸಿಕೊಳ್ಳುವ ಆಸಕ್ತ ಗ್ರಾಹಕರಿಗೆ ಸರ್ಕಾರದ ವತಿಯಿಂದ ನಿಯಮಾನುಸಾರ ಸಹಾಯಧನ ಸೌಲಭ್ಯವೂ ಲಭ್ಯವಿರಲಿದೆ. ಇದರಿಂದ ಗ್ರಾಹಕರಿಗೆ ಆರಂಭಿಕ ವೆಚ್ಚದ ಹೊರೆ ತಗ್ಗಲಿದ್ದು, ದೀರ್ಘಕಾಲದವರೆಗೆ ಉಚಿತವಾಗಿ ಇಂಧನ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ , ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಕಾಧಿಕಾರಿ ಗಿತ್ತೆ ಮಾಧವ ವಿಠಲರಾವ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂಧನ್, ಇಂಧನ ಪೂರೈಕೆ ಕಂಪನಿಗಳ ನೊಡೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.





Leave a comment