Home ಕ್ರೈಂ ನ್ಯೂಸ್ ದಾವಣಗೆರೆ ದೇವರಾಜ್ ಅರಸು ಬಡಾವಣೆ ಬಳಿ ಗಾಂಜಾ ಮಾರಾಟ; ಇಬ್ಬರ ಬಂಧನ, 1.5 ಕೆಜಿ ಗಾಂಜಾ ವಶ
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ದಾವಣಗೆರೆ ದೇವರಾಜ್ ಅರಸು ಬಡಾವಣೆ ಬಳಿ ಗಾಂಜಾ ಮಾರಾಟ; ಇಬ್ಬರ ಬಂಧನ, 1.5 ಕೆಜಿ ಗಾಂಜಾ ವಶ

Share
ದಾವಣಗೆರೆ
Share

ದಾವಣಗೆರೆ: ನಗರದ ದೇವರಾಜ್ ಅರಸು ಬಡಾವಣೆಯ ಫ್ಲೈ ಓವರ್ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ದಿನಾಂಕ 23-04-2026ರಂದು ರಾತ್ರಿ ಸಮಯದಲ್ಲಿ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಪೊಲೀಸರು, ನಗರದ ನಿವಾಸಿಗಳಾದ ತೌಫಿಕ್ (32) ಮತ್ತು ಶೇರು (23) ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ಸುಮಾರು 70 ಸಾವಿರ ರೂಪಾಯಿ ಮೌಲ್ಯದ 1500 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸುತ್ತಿದ್ದ ಒಂದು ಸ್ಕೂಟಿಯನ್ನು ವಶಪಡಿಸಿಕೊಳ್ಳಲಾಗಿದೆ.

ನಗರ ಡಿವೈಎಸ್ಪಿ ಶ್ರೀ ಶರಣಬಸವೇಶ್ವರ ಬಿ. ಅವರ ಮಾರ್ಗದರ್ಶನದಲ್ಲಿ, ಎ.ಎನ್.ಟಿ.ಎಫ್ (ANTF) ಇನ್ಸ್ಪೆಕ್ಟರ್ ಅಣ್ಣಯ್ಯ ಕೆ.ಟಿ., ಪಿಎಸ್ಐಗಳಾದ ಸಾಗರ್ ಅತ್ತಾರ್ವಾಲ, ಯುವರಾಜ್ ಮತ್ತು ಸಿಬ್ಬಂದಿ ವರ್ಗದವರು ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂಬಂಧ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಿರಿಯ ಅಧಿಕಾರಿಗಳು ತಂಡದ ಕಾರ್ಯಕ್ಷಮತೆಯನ್ನು ಪ್ರಶಂಸಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles