SUDDIKSHANA KANNADA NEWS/ DAVANAGERE/DATE:21_08_2025
ದಾವಣಗೆರೆ: ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ನಲ್ಲಿ ದಾವಣಗೆರೆ ಉತ್ತರ ಸಂಚಾರ ಠಾಣೆಯ ಎಎಎಸ್ಐ ಜಗದೀಶ್ ಮತ್ತು ಸಿಬ್ಬಂದಿಗಳು ಐವಿಎಂ ಕೇಸ್ ದಾಖಲಿಸುವ ವೇಳೆ ಏಕಮುಖವಾಗಿ ಸಂಚಾರಕ್ಕೆ ಮುಂದಾದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
READ ALSO THIS STORY: ದಾವಣಗೆರೆಯಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಆರೋಪ: ಗೃಹಿಣಿ ಆತ್ಮಹತ್ಯೆಗೆ ಶರಣು!
ಪೊಲೀಸರನ್ನು ನೋಡುತ್ತಿದ್ದಂತೆ ಬೈಕ್ ಸವಾರರು ವಾಪಸ್ ಅದೇ ರಸ್ತೆಯಲ್ಲಿ ಅಂದರೆ ಸಂಗೊಳ್ಳಿ ರಾಯಣ್ಣ ಮೇಲುಸೇತುವೆಯಲ್ಲಿ ಏಕಮುಖ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಹೊರಟರು. ಜಿಲ್ಲಾ ಪೊಲೀಸ್ ಕಚೇರಿ ಕಡೆಗೆ
ಬಂದ ಒಟ್ಟು 20 ಬೈಕ್ ಸವಾರರನ್ನು ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಉಮಾ ಪ್ರಶಾಂತ್ ಅವರು ತಡೆದು ನಿಲ್ಲಿಸಿದ್ದಾರೆ.
ಈ ವೇಳೆ ಜಿಲ್ಲೆಯಾದ್ಯಂತ ಹಾಫ್ ಹೆಲ್ಮೆಟ್ ನಿಷೇಧಿಸಲಾಗಿದೆ. ಎಲ್ಲರೂ ಐಎಸ್ಐ ಮಾರ್ಕ್ ಇರುವ ಫುಲ್ ಹೆಲ್ಮೆಟ್ ಗಳನ್ನು ಧರಿಸಬೇಕು. ವಾಹನದ ದಾಖಲಾತಿಗಳನ್ನು ಇಟ್ಟುಕೊಳ್ಳಬೇಕು. ಏಕಮುಖ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಚಾಲನೆ ಮಾಡಬಾರದೆಂದು ಸೂಚನೆ ನೀಡಿದರು.
ಏಕಮುಕ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ 17 ಬೈಕ್ ಗಳನ್ನು ವಶಕ್ಕೆ ಪಡೆದಿದ್ದು, ಸ್ಥಳದಲ್ಲೇ ಕೋರ್ಟ್ ನೋಟೀಸ್ ಜಾರಿ ಮಾಡಿ ನ್ಯಾಯಾಲಯದಲ್ಲಿ ದಂಡ ಕಟ್ಟಿ ಬಂದ ಬಳಿಕ ಬೈಕ್ ಗಳನ್ನು ಚಾಲಕರಿಗೆ ನೀಡಲಾಗುವುದು ಎಂದು
ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಉತ್ತರ ಸಂಚಾರ ಠಾಣೆಯ ಪಿಎಸ್ ಐ ಮಹಾದೇವ ಭತ್ತೆ ಹಾಗೂ ಉತ್ತರ ಸಂಚಾರ ಠಾಣೆಯ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.