Home ಕ್ರೈಂ ನ್ಯೂಸ್ Davanagere PDS Rice Scam: ದಾವಣಗೆರೆ ವಿದ್ಯಾನಗರ ಪೊಲೀಸರಿಂದ ಜಂಟಿ ದಾಳಿ; 1400 ಕೆಜಿಗೂ ಹೆಚ್ಚು ಪಡಿತರ ಧಾನ್ಯ ಜಪ್ತಿ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

Davanagere PDS Rice Scam: ದಾವಣಗೆರೆ ವಿದ್ಯಾನಗರ ಪೊಲೀಸರಿಂದ ಜಂಟಿ ದಾಳಿ; 1400 ಕೆಜಿಗೂ ಹೆಚ್ಚು ಪಡಿತರ ಧಾನ್ಯ ಜಪ್ತಿ!

Share
ದಾವಣಗೆರೆ
Share

ದಾವಣಗೆರೆ: ನಗರದ ಹಳೇ ಪಿಬಿ ರಸ್ತೆಯಲ್ಲಿನ ಗೋದಾಮೊಂದರಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಮತ್ತು ರಾಗಿಯನ್ನು ಸಂಗ್ರಹಿಸಿಟ್ಟಿದ್ದ ಜಾಗದ ಮೇಲೆ ವಿದ್ಯಾನಗರ ಠಾಣೆ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಪಡಿತರ ಧಾನ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯು ಜುಲೈ 19, 2026 ರಂದು ಯಶಸ್ವಿಯಾಗಿ ನಡೆದಿದೆ.

ಗೋದಾಮಿನಲ್ಲಿ ಅಕ್ರಮವಾಗಿ ಪಡಿತರ ದಾಸ್ತಾನು ಮಾಡಿರುವ ಬಗ್ಗೆ ಲಭ್ಯವಾದ ಖಚಿತ ಮಾಹಿತಿ ಮೇರೆಗೆ, ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರ ನಿರ್ದೇಶನದಂತೆ ಈ ದಾಳಿ ಹಮ್ಮಿಕೊಳ್ಳಲಾಗಿತ್ತು. ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಪರಮೇಶ್ವರ ಹೆಗಡೆ ಹಾಗೂ ನಗರ ಡಿವೈಎಸ್ಪಿ ಶ್ರೀ ಶರಣಬಸವೇಶ್ವರ ಬಿ ರವರ ನೇರ ಮಾರ್ಗದರ್ಶನದಲ್ಲಿ, ವಿದ್ಯಾನಗರ ಪೊಲೀಸ್ ಠಾಣೆಯ ಪಿ ಐ ಶ್ರೀಮತಿ ಶಿಲ್ಪಾ ರವರ ನೇತೃತ್ವದ ತಂಡ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಆಹಾರ ನಿರೀಕ್ಷಕರು ಜಂಟಿಯಾಗಿ ಸ್ಥಳಕ್ಕೆ ಭೇಟಿ ನೀಡಿದರು.

ಗೋದಾಮು ಹಾಗೂ ಅಲ್ಲಿ ನಿಲ್ಲಿಸಿದ್ದ ಲಾರಿಯಲ್ಲಿದ್ದ ಮಾಲನ್ನು ಪಂಚರ ಸಮಕ್ಷಮ ಪರಿಶೀಲಿಸಿದಾಗ ಅಕ್ರಮ ಪಡಿತರ ಇರುವುದು ದೃಢಪಟ್ಟಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಪಂಚನಾಮೆ ನಡೆಸಿ ತೂಕ ಮಾಡಿಸಿದಾಗ, ಒಟ್ಟು ₹49,320/- ಮೌಲ್ಯದ 680 ಕೆ.ಜಿ. ಪಡಿತರ ಅಕ್ಕಿ ಹಾಗೂ 810 ಕೆ.ಜಿ. ಪಡಿತರ ರಾಗಿ ಪತ್ತೆಯಾಗಿದ್ದು, ಇವುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಆಹಾರ ನಿರೀಕ್ಷಕರು ನೀಡಿದ ಅಧಿಕೃತ ದೂರಿನ ಮೇರೆಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕಲಂ 3 & 7 ಇಸಿ ಆಕ್ಟ್ (Essential Commodities Act) ಮತ್ತು ಕಲಂ 18 ಪಿಡಿಎಸ್ ಆರ್ಡರ್ (PDS Order) ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ.

ಪೊಲೀಸ್ ತಂಡಕ್ಕೆ ಪ್ರಶಂಸೆ: ಸಕಾಲದಲ್ಲಿ ದಾಳಿ ನಡೆಸಿ ಅಕ್ರಮವನ್ನು ತಡೆದ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀಮತಿ ಶಿಲ್ಪ ವೈ ಎಸ್, ವಿದ್ಯಾನಗರ ಪಿಎಸ್ಐ ಶ್ರೀ ಸಚಿನ್ ಬಿರಾದಾರ್ ಹಾಗೂ ಸಿಬ್ಬಂದಿಗಳಾದ ಮಲ್ಲೇಶ್ ಹೆಚ್, ಬಸವರಾಜ್ ಮತ್ತು ಮಾಲತೇಶ್ ಇವರ ಚುರುಕಿನ ಕಾರ್ಯಾಚರಣೆಯನ್ನು ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕ ಶೇಖರ್ ಹೆಚ್. ಟಿ. ಅವರು ಮುಕ್ತಕಂಠದಿಂದ ಶ್ಲಾಘಿಸಿ, ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles