ದಾವಣಗೆರೆ: ದಾವಣಗೆರೆ ಬಿಜೆಪಿಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರರಿಗೆ ಬೆಲೆ ಇಲ್ಲ. ದಾವಣಗೆರೆಯಲ್ಲಿ ಜೆಡಿಎಸ್ ಗೆ ನೆಲೆ ಇಲ್ಲ. ಹಾಗಾಗಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಮಾತಿಗೂ ಕಿಮ್ಮತ್ತು ಇಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ವ್ಯಂಗ್ಯವಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅನ್ಬು ಕಿತ್ತೊಗೆಯಲು ಯಾರಿಂದಲೂ ಸಾಧ್ಯವಿಲ್ಲ. ಜೆಡಿಎಸ್ 50 ಸ್ಥಾನ ದಾಟುತ್ತಿಲ್ಲ. ಅವರಿಗೆ ಬೇರೆ ಪಕ್ಷದ ಅನಿವಾರ್ಯತೆ ಇದೆ. ಜೆಡಿಎಸ್ ಮೈತ್ರಿ ವರ್ಕ್ ಔಟ್ ಆಗುವುದಿಲ್ಲ, ದಾವಣಗೆರೆಯಲ್ಲಿ ಜೆಡಿಎಸ್ ಪ್ರಭಾವ ಇಲ್ಲ. ಅಶೋಕ್, ವಿಜಯೇಂದ್ರ, ಕುಮಾರಸ್ವಾಮಿ ಅವರ ಮಾತಿಗೆ ಬೆಲೆ ಇಲ್ಲ. ಅವರದ್ದು ಹಿಟ್ ಅಂಡ್ ರನ್ ಎಂದು ಟೀಕಿಸಿದರು.
ರಾಜ್ಯದ ಎರಡು ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಶತಸಿದ್ಧ. ತಮಿಳುನಾಡಿನಲ್ಲಿ ಕಾಂಗ್ರೆಸ್ ಮೈತ್ರಿ ಭದ್ರವಾಗಿದ್ದು ಡಿಎಂಕೆ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ. ಕೇರಳ, ಅಸ್ಸಾಂನಲ್ಲಿ ಕೂಡ ಕಾಂಗ್ರೆಸ್ ಗೆಲ್ಲುವ
ಸಾಧ್ಯತೆ ಹೆಚ್ಚು. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹರಸಾಹಸ ಪಡುತ್ತಿದೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಶಾಸಕರುಗಳಾದ ರವಿಕುಮಾರ್ ಗಣಿಗ, ಬಸವರಾಜ್ ಶಿವಗಂಗಾ, ಹರೀಶ್ ಗೌಡ, ಎ.ಸಿ.ಶ್ರೀನಿವಾಸ್, ದಿನೇಶ್ ಗೂಳಿಗೌಡ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.





Leave a comment