ದಾವಣಗೆರೆ: ಜಿಲ್ಲೆಯ ಪ್ರಮುಖ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 25 ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ ಹಲವು ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಣೆ ತಿಳಿಸಿದೆ.
ವಿದ್ಯುತ್ ವ್ಯತ್ಯಯದ ಸಮಯ:
ದಿನಾಂಕ: ಜೂನ್ 25, 2026
ಸಮಯ: ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ
ಬಾಧಿತವಾಗಲಿರುವ ವಿದ್ಯುತ್ ಕೇಂದ್ರಗಳು:
66/11 ಕೆ.ವಿ. ಕುಕ್ಕವಾಡ ಶ್ಯಾಗಲೆ ವಿತರಣ ಕೇಂದ್ರ
66/11 ಕೆ.ವಿ. ಮೇಳ್ಳೆಕಟ್ಟೆ ವಿತರಣ ಕೇಂದ್ರ
66/11 ಕೆ.ವಿ. ಕಾಡಜ್ಜಿ ವಿದ್ಯುತ್ ವಿತರಣ ಕೇಂದ್ರ
ವಿದ್ಯುತ್ ಕೈಕೊಡಲಿರುವ ಗ್ರಾಮಗಳ ಪಟ್ಟಿ:
ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು, ಶ್ಯಾಗಲೆ, ಕಂದ್ಗಲ್ಲು, ಕೋಡಿಹಳ್ಳಿ, ಗೋಣಿವಾಡ, ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ, ರೆಡ್ಡಿ ಕ್ಯಾಂಪ್, ಪುಟಗಾನಾಳು, ಶ್ರೀರಾಮ ನಗರ, ಕಾಡಜ್ಜಿ, ಬಸವಾನಾಳು, ನಾಗರಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಸೂಚನೆ:
ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಈ ಅವಧಿಯಲ್ಲಿ ಬೆಸ್ಕಾಂ ಸಿಬ್ಬಂದಿಯೊಂದಿಗೆ ಸಹಕರಿಸಬೇಕಾಗಿ ವಿನಂತಿಸಲಾಗಿದೆ.





Leave a comment