Home ದಾವಣಗೆರೆ ದಾವಣಗೆರೆಯಲ್ಲಿ ಆಗಸ್ಟ್ 28ಕ್ಕೆ ವಿದ್ಯುತ್ ವ್ಯತ್ಯಯ: ಬೆಸ್ಕಾಂ ವ್ಯಾಪ್ತಿಯ ಈ ಭಾಗಗಳಲ್ಲಿ ಬೆಳಿಗ್ಗೆ 10ರಿಂದ ಕರೆಂಟ್ ಕಟ್!
ದಾವಣಗೆರೆಬೆಂಗಳೂರು

ದಾವಣಗೆರೆಯಲ್ಲಿ ಆಗಸ್ಟ್ 28ಕ್ಕೆ ವಿದ್ಯುತ್ ವ್ಯತ್ಯಯ: ಬೆಸ್ಕಾಂ ವ್ಯಾಪ್ತಿಯ ಈ ಭಾಗಗಳಲ್ಲಿ ಬೆಳಿಗ್ಗೆ 10ರಿಂದ ಕರೆಂಟ್ ಕಟ್!

Share
ದಾವಣಗೆರೆ
Share

ದಾವಣಗೆರೆ: ಹೊಸಹಳ್ಳಿ ಹಾಗೂ ಆವರಗೆರೆ, ವಿದ್ಯುತ್ ಕೇಂದ್ರದಲ್ಲಿ  ತ್ರೈಮಾಸಿಕ ನಿರ್ವಹಣೆ ಮತ್ತು  ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 28 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ  ವಿದ್ಯುತ್ ವ್ಯತ್ಯಯವಾಗಲಿದೆ.

ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ, ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ.

ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವ್ಯತ್ಯಯದಿಂದ ಸಾರ್ವಜನಿಕರಿಗೆ ಉಂಟಾಗುವ ಅನಾನುಕೂಲಕ್ಕೆ ಬೆಸ್ಕಾಂ ವಿಷಾದಿಸಿದ್ದು, ಸಹಕರಿಸುವಂತೆ ಕೋರಿದೆ.

Share

Leave a comment

Leave a Reply

Your email address will not be published. Required fields are marked *