ದಾವಣಗೆರೆ: ನಗರದ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಫೀಡರ್‌ಗಳಲ್ಲಿ ಬೆಸ್ಕಾಂ (BESCOM) ವತಿಯಿಂದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮೇ 23 ರಂದು ನಗರದ ಹಲವು ಪ್ರಮುಖ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಬೆಳಿಗ್ಗೆ 9 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಒಟ್ಟು 8 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು:
ಶ್ರೀರಾಮ ಬಡಾವಣೆ, ಡಿ.ಸಿ.ಎಂ. ಟೌನ್‌ಶಿಪ್, ಶಕ್ತಿನಗರ, ಅಂಬಿಕಾ ನಗರ, ಕೊಟ್ಟೂರೇಶ್ವರ ಬಡಾವಣೆ, ಜಯನಗರ, ಶೇಖರಪ್ಪ ಗೋಡೌನ್ ಬನಶಂಕರಿ ದೇವಸ್ಥಾನ, ರೆಡ್ಡಿ ಬಿಲ್ಡಿಂಗ್ ಶೆಸಾಂ ಲೇಔಟ್ ಹಾಗೂ ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಹಾಗೂ ಇ.ಎಸ್.ಐ . ಆಸ್ಪತ್ರೆ ಕೆ.ಟಿ.ಜೆ ನಗರ ಪೋಲಿಸ್ ಠಾಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವುಂಟಾಗಲಿದೆ.
ಕಾಮಗಾರಿ ಅವಧಿಯಲ್ಲಿ ಸಾರ್ವಜನಿಕರು ಹಾಗೂ ಗ್ರಾಹಕರು ಬೆಸ್ಕಾಂ ಸಿಬ್ಬಂದಿಯೊಂದಿಗೆ ಸಹಕರಿಸಬೇಕಾಗಿ ಕೋರಲಾಗಿದೆ.
ಸಾರ್ವಜನಿಕರು/ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ತಿಳಿಸಿದ್ದಾರೆ.





Leave a comment