ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere ಲೋಕಸಭೆಗೆ ಪ್ರಭಾ ಮಲ್ಲಿಕಾರ್ಜುನ್ ಸ್ಪರ್ಧೆ ಆಲೋಚನೆ ಇಲ್ಲ, ಚರ್ಚೆಯೂ ನಡೆದಿಲ್ಲ: ಎಸ್. ಎಸ್. ಮಲ್ಲಿಕಾರ್ಜುನ್ ಸ್ಪಷ್ಟನೆ

On: August 27, 2023 4:28 PM
Follow Us:
DR. PRABHA MALLIKARJUN
---Advertisement---

SUDDIKSHANA KANNADA NEWS/ DAVANAGERE/ DATE:27-08-2023

ದಾವಣಗೆರೆ (Davanagere): ಎಸ್. ಎಸ್. ಕೇರ್ ಟ್ರಸ್ಟ್ ನ ಟ್ರಸ್ಟಿ ಹಾಗೂ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರು ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆಯ ಆಲೋಚನೆ ಸದ್ಯಕ್ಕಿಲ್ಲ. ಕಾಂಗ್ರೆಸ್ ನಲ್ಲಿ ಸ್ಪರ್ಧೆ ಮಾಡಲು ತುಂಬಾ ಮಂದಿ ಇದ್ದಾರೆ. ಈ ಬಗ್ಗೆ ಇದುವರೆಗೆ ಯಾವುದೇ ಸಮಾಲೋಚನೆ ನಡೆದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸ್ಪಷ್ಟನೆ ನೀಡಿದರು.

ನಗರದ ಕುವೆಂಪು ಕನ್ನಡ ಭವನದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪ್ರಭಾ ಮಲ್ಲಿಕಾರ್ಜುನ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡುವ ಕುರಿತಂತೆ ಯಾವುದೇ ಚರ್ಚೆ
ನಡೆದಿಲ್ಲ ಎಂದರು.

ಈ ಸುದ್ದಿಯನ್ನೂ ಓದಿ:

Davanagere: ಎಂ. ಪಿ. ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆ ಚರ್ಚೆಯಾಗಿಲ್ಲ, ಚನ್ನಗಿರಿ ಶಾಸಕರ ಅಸಮಾಧಾನ ಇಲ್ಲ: ಎಸ್. ಎಸ್. ಮಲ್ಲಿಕಾರ್ಜುನ್ ಸ್ಪಷ್ಟನೆ

ಜಗಳೂರು ಶಾಸಕ ದೇವೇಂದ್ರಪ್ಪರ ಕುಟುಂಬದವರು ವರಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮಕ್ಕೆ ನಿವಾಸಕ್ಕೆ ಆಹ್ವಾನಿಸಿದ್ದರು. ಈ ಕಾರಣಕ್ಕೆ ಪ್ರಭಾ ಅವರು ಜಗಳೂರಿಗೆ ಹೋಗಿದ್ದರು. ಇದಕ್ಕೆ ರಾಜಕೀಯ ಕಲ್ಪಿಸುವುದು ಬೇಡ. ಕಾಂಗ್ರೆಸ್ ಮುಖಂಡರು,
ಕಾರ್ಯಕರ್ತರು ಒತ್ತಾಯ ಹೇರುತ್ತಿರುವ ಕುರಿತಂತೆ ಹೆಚ್ಚಿನ ಮಾಹಿತಿ ಇಲ್ಲ. ಕಾರ್ಯಕ್ರಮಗಳಿಗೆ ಹೋಗುತ್ತಿದ್ದಾರೆ. ಹಾಗೆಂದ ಮಾತ್ರಕ್ಕೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂದೇನೂ ಅಲ್ಲವಲ್ಲ ಎಂದರು.

ಕುಂದುವಾಡ ಕೆರೆ ಸೇರಿದಂತೆ ಬಿಜೆಪಿಯವರು ಹಾಳು ಮಾಡಿದ್ದಾರೆ. ಶೇಕಡಾ 40ರಷ್ಟು ಕಮೀಷನ್ ಹೊಡೆದು ಕಳಪೆ ಕಾಮಗಾರಿ ಮಾಡಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಯಾವುದಾದರೂ ಹೊಸ ಯೋಜನೆಗೆ ಹಣ ತಂದಿದ್ದಾರೆಯೇ? ನಮ್ಮ
ಕಾಲದಲ್ಲಿ ಆದ ಕಾಮಗಾರಿಗಳನ್ನು ಮಾಡಿದ್ದಾರೆ. ಅದೂ ಸರಿಯಾಗಿ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳ ಘೋಷಣೆಗೆ ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಎಲ್ಲವನ್ನೂ ರಾಜ್ಯ ಸರ್ಕಾರವೇ ಮಾಡಲಾಗದು. ಕೇಂದ್ರ ಸರ್ಕಾರದ ಸಹಕಾರ ನೆರವು ಬೇಕು. ಕೇಂದ್ರ ಸರ್ಕಾರವು ಸೂಕ್ತ ನೆರವು ಕೊಟ್ಟರೆ ಘೋಷಣೆ
ವಿಳಂಬವಾಗದು ಎಂದು ಮಲ್ಲಿಕಾರ್ಜುನ್ ತಿಳಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment