ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ದಾವಣಗೆರೆ ಪತ್ರಕರ್ತರ ಸಮ್ಮೇಳನಕ್ಕೂ ದೊಡ್ಡ ಮಟ್ಟದ ನೆರವು ದೊರಕಿಸಿಕೊಡಲು ಪ್ರಯತ್ನ: ಕೆ.ವಿ.ಪ್ರಭಾಕರ್ ಭರವಸೆ

On: August 27, 2023 9:51 AM
Follow Us:
K. V. PRABHAKAR SPEACH
---Advertisement---

SUDDIKSHANA KANNADA NEWS/ DAVANAGERE/ DATE:27-08-2023

ದಾವಣಗೆರೆ (Davanagere): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 38 ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣವಾಗಿ ನಡೆಸಲು ಎಲ್ಲಾ ರೀತೀಯ ಅಗತ್ಯ ಸಹಕಾರ ಸರ್ಕಾರದಿಂದ ಒದಗಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ತಿಳಿಸಿದರು.

ನಗರದ ಅಪೂರ್ವ ಹೊಟೇಲ್ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ 38 ನೇ ಪತ್ರಕರ್ತರ ಸಮ್ಮೇಳನದ ಪೂರ್ವ ಸಿದ್ಧತಾ ಸಭೆಯ ಉದ್ಘಾಟನೆ ನೆರವೇರಿಸಿ, ಸಮ್ಮೇಳನದ ವೆಬ್ ಸೈಟ್ ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮೊದಲೆಲ್ಲಾ ಪತ್ರಕರ್ತರ ಸಮ್ಮೇಳನಗಳು ನಡೆಯುವಾಗ ಸರ್ಕಾರದ ನೆರವು ಸೂಕ್ತವಾಗಿ ದೊರೆಯುತ್ತಿರಲಿಲ್ಲ. 2013 ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮೊದಲ ಬಾರಿ ದೊಡ್ಡ ಮಟ್ಟದಲ್ಲಿ ಸ್ಪಂದಿಸಿ 15 ಲಕ್ಷ ರೂಪಾಯಿ ನೆರವು ನೀಡಿದ್ದರು. 2023 ರ ಈ ಸಮ್ಮೇಳನದಲ್ಲೂ ಅಷ್ಟೇ ದೊಡ್ಡ ಮಟ್ಟದ ನೆರವು ದೊರಕಿಸಿಕೊಡಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ಈ ಸುದ್ದಿಯನ್ನೂ ಓದಿ: 

Inquiry: ಬಿಜೆಪಿ ಭ್ರಷ್ಟಾಚಾರ ಆರೋಪ ತನಿಖೆಗೆ ರಾಜ್ಯ ಸರ್ಕಾರ ಅಸ್ತು: ಕೋವಿಡ್ ತನಿಖೆಗೆ ನ್ಯಾ. ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ

ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ ಪತ್ರಿಕೋದ್ಯಮದ ಸಾಧ್ಯತೆಗಳನ್ನು ವಿಸ್ತರಿಸುತ್ತಿರುವ ರೀತಿಯಲ್ಲೇ ಹಲವು ಸವಾಲುಗಳನ್ನು ಸೃಷ್ಟಿಸುತ್ತಿದೆ. ಈ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಬೇಕಾದ ಸಿದ್ದತೆ ಮತ್ತು ತರಬೇತಿ ಪತ್ರಕರ್ತ ಸಮೂಹಕ್ಕೆ ದೊರಕಬೇಕಿದೆ. ಈ ಎಲ್ಲಾ ಸಂಗತಿಗಳು ಸಮ್ಮೇಳನದಲ್ಲಿ ಚರ್ಚೆ ಆಗಲಿ ಎಂದು ಆಶಿಸಿದರು.

ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಎಂ.ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕ್ರುದ್ದೀನ್, ವಾರ್ತಾಧಿಕಾರಿ ಧನಂಜಯಪ್ಪ, ಖಜಾಂಚಿ
ಬದ್ರಿನಾಥ್, ಕಾರ್ಯದರ್ಶಿ ವೀರೇಶ್ ಮತ್ತಿತರರು ಹಾಜರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment