ದಾವಣಗೆರೆ: ನಗರದ ಐತಿಹಾಸಿಕ ಹಳೇಪೇಟೆಯ ಶ್ರೀ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವ ಹಾಗೂ ಗುಗ್ಗಳ ಮಹೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಅಗ್ನಿಕುಂಡೋತ್ಸವದಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪಾಲ್ಗೊಂಡು, ಕೆಂಡ ತುಳಿಯುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಮರ್ಥ್ ಶಾಮನೂರು, “ನನ್ನ ಅಜ್ಜನವರ ಕಾಲದಿಂದಲೂ ನಮ್ಮ ಕುಟುಂಬ ಈ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದಿದೆ. ಪ್ರತಿ ವರ್ಷ ಅಗ್ನಿಕುಂಡ ಪ್ರವೇಶಿಸಿ ದೇವರಿಗೆ ಭಕ್ತಿ ಸಲ್ಲಿಸುವುದು ನಮ್ಮ ಮನೆತನದ ರೂಢಿ,” ಎಂದು ಹಳೆಯ ನೆನಪುಗಳನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಪ್ರಮುಖ ಮುಖಂಡರು ಹಾಗೂ ಸಾವಿರಾರು ಭಕ್ತಾಧಿಗಳು ಉಪಸ್ಥಿತರಿದ್ದು, ದೈವದರ್ಶನ ಪಡೆದರು.





Leave a comment