Home ದಾವಣಗೆರೆ ದಾವಣಗೆರೆ: ಪ್ರತಿಷ್ಠಿತ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ದಾವಣಗೆರೆಬೆಂಗಳೂರು

ದಾವಣಗೆರೆ: ಪ್ರತಿಷ್ಠಿತ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Share
ದಾವಣಗೆರೆ
Share

ದಾವಣಗೆರೆ: 2026-27ನೇ ಸಾಲಿನಲ್ಲಿ ಪ್ರತಿಭಾನ್ವಿತ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳ 6ನೇ ತರಗತಿಗೆ ಸೇರ್ಪಡೆ ಮಾಡಲು ಅಧಿಕೃತ ಜಾಲತಾಣ https://swd.karnataka.gov.in ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಏಪ್ರಿಲ್ 15, 2026 ರಿಂದ ಮೇ 04, 2026 ರವರೆಗೆ ಅವಕಾಶವಿರುತ್ತದೆ. ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಕನಿಷ್ಠ ಶೇ.60ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನವು 2.50 ಲಕ್ಷ ರೂಪಾಯಿಗಳ ಮಿತಿಯೊಳಗಿರಬೇಕು. ಅರ್ಜಿದಾರರು ಕಡ್ಡಾಯವಾಗಿ ದಾವಣಗೆರೆ ಜಿಲ್ಲೆಯ ನಿವಾಸಿಯಾಗಿರಬೇಕು. ಅರ್ಹತಾ ಪರೀಕ್ಷೆಯ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಅಥವಾ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಛೇರಿ ದೂರವಾಣಿ ಸಂಖ್ಯೆ: 08192-231782 ಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *