ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ಮಕ್ಕಳ ಭವಿಷ್ಯಕ್ಕಾಗಿ ಎಲ್ಲರೂ ಶ್ರಮ ವಹಿಸಬೇಕಿದೆ: ಮೊಹಮ್ಮದ್ ಜಿಕ್ರಿಯಾ

On: June 22, 2023 4:55 AM
Follow Us:
School program In Davanagere
---Advertisement---

SUDDIKSHANA KANNADA NEWS/ DAVANAGERE/ DATE:22-06-2023

ದಾವಣಗೆರೆ (Davanagere): ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳ ಭವಿಷ್ಯಕ್ಕಾಗಿ ಪೋಷಕರು ಹಾಗೂ ಶಿಕ್ಷಕರೊಂದಿಗೆ ಎಲ್ಲರೂ ಕೈಜೋಡಿಸುವುದು ಅಗತ್ಯವಾಗಿದೆ ಎಂದು ಜವಾಹರ್ ಬಾಲ್ ಮಂಚ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಅಭಿಪ್ರಾಯ ಪಟ್ಟಿದ್ದಾರೆ.

ಈ ಸುದ್ದಿಯನ್ನೂ ಓದಿ:

Davanagere: ವಿಧಿ ಬರಹ ಎಂಥ ಘೋರ… ವಿಧಿ ಕ್ರೂರತೆಗೆ ಇದಕ್ಕಿಂತ ಸಾಕ್ಷಿ ಬೇಕಾ… ಮುದ್ದಾದ ಮಗು ಅಜ್ಜಿ ಕಣ್ಣೆದುರೇ ದುರಂತ ಅಂತ್ಯ…!

ಜವಾಹರ್ ಬಾಲ್ ಮಂಚ್ ದಾವಣಗೆರೆ (Davanagere)ಜಿಲ್ಲಾ ಸಮಿತಿ ಆಶ್ರಯದಲ್ಲಿ ನಿಟ್ಟುವಳ್ಳಿಯ  ಶ್ರೀ ಸರ್ವಜ್ಞ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಬಡ ಮಕ್ಕಳಿಗೆ ಉಚಿತ ನೋಟ್ ಬುಕ್ ಹಾಗೂ ಇನ್ನಿತರೆ ಅಗತ್ಯ ವಸ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳ ಭವಿಷ್ಯದ ಬಗ್ಗೆ ಕೇವಲ ಪೋಷಕರು ಹಾಗೂ ಶಿಕ್ಷಕರಲ್ಲದೇ ನಾವೂ ಸಹ ಅವರೊಂದಿಗೆ ಕೈಜೋಡಿಸಿ ಅವರ ಏಳಿಗೆಗಾಗಿ ಶ್ರಮಿಸಬೇಕಿದೆ ಎಂದರು.

ಹಲವಾರು ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಮನೆಯ ಕಷ್ಟಗಳನ್ನು ನೋಡಿ ವಿದ್ಯಾಭ್ಯಾಸ ಮೊಟಕುಗೊಳಿಸಿರುವುದನ್ನು ನಾವು ನೋಡಿದ್ದೇವೆ. ಇಂಥ ಮಕ್ಕಳಿಗೆ ನಾವು ನಮ್ಮ ಕೈಲಾದ ಸಹಾಯ ಮಾಡಿದರೆ ಮುಂದೆ ಮಕ್ಕಳ ಭವಿಷ್ಯ ಉಜ್ವಲ ಆಗುತ್ತದೆ. ಆದ್ದರಿಂದ ಅಂಥಾ ಪ್ರತಿಭಾವಂತ ಮಕ್ಕಳ ಜವಾಬ್ದಾರಿಯನ್ನು ಸಾರ್ವಜನಿಕರು ವಹಿಸಿಕೊಳ್ಳಬೇಕು ಹಾಗೂ ಅವರ ಉಜ್ವಲ ಭವಿಷ್ಯಕ್ಕಾಗಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪದಾಧಿಕಾರಿಗಳಾದ ಸಲ್ಮಾ ಬಾನು ಮಾತನಾಡಿ ಇತ್ತೀಚೆಗೆ ಬಡತನದಿಂದಾಗಿ ಪ್ರತಿವರ್ಷ ಅನೇಕ ಮಕ್ಕಳು ಶಾಖೆ ಬಿಟ್ಟು ಕೂಲಿ ಕೆಲಸಕ್ಕೆ ಹೋಗುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥ ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಸಹಾಯಕ್ಕೆ ಸಂಘ ಸಂಸ್ಥೆಗಳು, ಎನ್ ಜಿ.ಓ ಗಳು ಮುಂದೆ ಬರಬೇಕು. ಇದರಿಂದಾಗಿ ಮಕ್ಕಳು ಶಿಕ್ಷಣ ವಂಚಿತರಾಗುವುದನ್ನು ತಡೆಗಟ್ಟಬಹುದು ಎಂದು ಅಭಿಪ್ರಾಯಪಟ್ಟರು.

ಇನ್ನೋರ್ವ ಪದಾಧಿಕಾರಿ ಹಾಗೂ ವಕೀಲರಾದ ಪ್ರೇಮಾ ಅವರು ಮಾತನಾಡಿ ಬಡ ಶಿಕ್ಷಣ ವಂಚಿತರಾಗಿರುವ ಮಕ್ಕಳ ಬಗ್ಗೆ ಸರ್ಕಾರ ಗಮನ ಹರಿಸಿ ಇಂಥ ಮಕ್ಕಳಿಗೆ ವಿಶೇಷ ಕಾರ್ಯಕ್ರಮ ರೂಪಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಶಿಲ್ಪಾ ಪರಶುರಾಮ್, ಸಿದ್ದೇಶ್ ಹೊನ್ನಳ್ಳಿ, ಫಯಾಜ್ ಅಹ್ಮದ್, ಡಿ. ರೂಪಾ, ವೀರೇಶ್, ಉಮರ್, ಶಾಲೆಯ ಮುಖ್ಯ ಶಿಕ್ಷಕ ಸುರೇಶ್, ಸಹ ಶಿಕ್ಷಕ ಜಗದೀಶ್, ವಿಶ್ವನಾಥ್, ನಾಗರಾಜ್, ಪದ್ಮಾವತಿ ಮತ್ತಿತರರು ಹಾಜರಿದ್ದರು.

Davanagere Update, ದಾವಣಗೆೆರೆ ಸುದ್ದಿ, ದಾವಣಗೆರೆ ನ್ಯೂಸ್, ದಾವಣಗೆರೆ ಶಾಲಾ ಕಾರ್ಯಕ್ರಮ

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ದಾವಣಗೆರೆ

ದಾವಣಗೆರೆಯಲ್ಲಿ ಆನ್ ಲೈನ್ ಗೇಮ್ ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ ಆತ್ಮಹತ್ಯೆ : ಪಿಎಂ, ಸಿಎಂ ಸೇರಿ ಹಲವರಿಗೆ ಬರೆದಿರುವ ಪತ್ರದಲ್ಲೇನಿದೆ?

ಕೋವಿಡ್ ಲಸಿಕೆಯಿಂದ ಹೃದಯಾಘಾತ: ಸುಳ್ಳು ಸುದ್ದಿ ಹಬ್ಬಿಸ್ತಿದ್ದಾರಂತೆ ಸಿಎಂ ಸಿದ್ದರಾಮಯ್ಯ!

ಸಿದ್ದರಾಮಯ್ಯ

ಸಿದ್ದರಾಮಯ್ಯರ ದುರಂಹಕಾರಿ ವರ್ತನೆಗೆ ಸ್ವಾಭಿಮಾನಿ ಅಧಿಕಾರಿ ಸ್ವಯಂನಿವೃತ್ತಿಗೆ ನಿರ್ಧಾರವಂತೆ!

ಕಾನೂನು

ತಕ್ಷಣ ಭೂಸ್ವಾಧೀನ ಕಾನೂನು ಹಿಂಪಡೆಯಿರಿ: ಸಿಎಂಗೆ ಪಂಡಿತಾರಾಧ್ಯ ಶ್ರೀಗಳ ಬಹಿರಂಗ ಮನವಿ

ಜುಲೈ 5ಕ್ಕೆ ಸಿದ್ಧಣ್ಣ ಜನುಮದಿನ: ಸರ್ವ ಜನಾಂಗದ ಪ್ರೀತಿಯ ಸರದಾರ.. ಬಿಜೆಪಿ ಕಟ್ಟಾಳು, ನಿಷ್ಠಾವಂತ ಡಾ. ಜಿ.ಎಂ. ಸಿದ್ದೇಶ್ವರ: ಬಾಡದ ಆನಂದರಾಜ್

ಈ ರಾಶಿಯವರಿಗೆ ಉನ್ನತ ಸ್ಥಾನ ಇದೆ ಆದರೆ ಪವರ್ ಇಲ್ಲ, ಈ ರಾಶಿಯ ದಂಪತಿಗಳಿಗೆ ಎಲ್ಲಾ ಇದ್ದರೂ ಮನಶಾಂತಿ ಇಲ್ಲ

Leave a Comment