SUDDIKSHANA KANNADA NEWS/ DAVANAGERE/ DATE:15-10-2023
ದಾವಣಗೆರೆ (Davanagere: ಬೆಂಗಳೂರಿನಲ್ಲಿ ನಡೆದ ಪ್ರೌಢಶಾಲೆಯ ವಿಭಾಗದ ಬಾಲಕರ ಬೆಂಗಳೂರು ವಿಭಾಗ ಮತ್ತು ರಾಜ್ಯ ಮಟ್ಟದ ಖೋ ಖೋ ಕ್ರೀಡಾಕೂಟದಲ್ಲಿ ದಾವಣಗೆರೆ ತಾಲೂಕಿನ ತುರ್ಚಘಟ್ಟ ಆಂಜನೇಯ ಸರ್ಕಾರಿ ಪ್ರೌಢಶಾಲೆಯ ಬಾಲಕರು ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Read Also This Story:
Basavaraj Bommai: ಅಕ್ರಮ ಹಣ ಪತ್ತೆ ಪ್ರಕರಣ ಸಿಬಿಐ, ಇಡಿ ತನಿಖೆಯಾಗಲಿ: ಬಸವರಾಜ ಬೊಮ್ಮಾಯಿ ಆಗ್ರಹ
ದಾವಣಗೆರೆ ಪಿ.ಜೆ.ಬಡಾವಣೆಯ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ದೈಹಿಕ ಶಿಕ್ಷಕ ರವಿ ಅವರು ಈ ಬಾಲಕರಿಗೆ ತರಬೇತಿ ನೀಡಿದ್ದರು. ಮಕ್ಕಳ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ದೈಹಿಕ ಶಿಕ್ಷಕ ಎಸ್.ಶ್ರೀನಿವಾಸ್ ಅಭಿನಂದನೆ ಸಲ್ಲಿಸಿದ್ದಾರೆ.