SUDDIKSHANA KANNADA NEWS/ DAVANAGERE/ DATE:30-09-2023
ದಾವಣಗೆರೆ (Davanagere): ವೀರಶೈವ ಲಿಂಗಾಯತ ಸಮುದಾಯಕ್ಕೆ ಡಿಸಿಎಂ ಹುದ್ದೆ ಬೇಡ, ಮುಖ್ಯಮಂತ್ರಿ ಸ್ಥಾನವೇ ಕೊಡಿ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ
ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
Read Also This Story:
Davanagere: ಎಡಪಂಥೀಯ ಸಾಹಿತಿಗಳಿಗೆ ಬೆದರಿಕೆ ಪತ್ರ: ದಾವಣಗೆರೆಯ ಜಾಲಿನಗರದ ಆರೋಪಿ ಸೆರೆ, ಪೊಲೀಸರ ವಿಚಾರಣೆ ವೇಳೆ ಬಾಯ್ಬಿಟ್ಟ ಸತ್ಯವೇನು…?
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಕಾರ್ಯಕ್ರಮ ಇತ್ತು, ಅಲ್ಲಿ ಶ್ರೀ ಕುಮಾರಸ್ವಾಮಿಗಳ ಪ್ರಶಸ್ತಿ ಪ್ರದಾನ ಮಾಡಿದರು, ಆ ಸಂದರ್ಭದಲ್ಲಿ ವೇದಿಕೆಯ ಮೇಲೆ ಭಾಷಣ ಮಾಡುವಾಗ ಸತ್ಯವನ್ನು ಹೇಳಿದ್ದೇನೆ, ಈಗಲೂ ಅದೇ ಹೇಳ್ತಿನಿ, ಮುಖ್ಯವಾದ ಹುದ್ದೆಗಳನ್ನು ಲಿಂಗಾಯತ ಸಮುದಾಯದ ಬಹಳಷ್ಟು ಜನರಿಗೆ ಕೊಟ್ಟಿಲ್ಲ, ಇದರ ಬಗ್ಗೆ ನಾನು ಯಾವುದೇ ಮಂತ್ರಿಗಳ ಬಳಿ ಹೇಳಲು ಹೋಗಿಲ್ಲ ಎಂದರು.
ವೀರಶೈವ ಲಿಂಗಾಯತರಿಗೆ ಡಿಸಿಎಂ ನೀಡುವ ವಿಚಾರ ಮಾತನಾಡಿದ ಶಾಮನೂರು ಡಿಸಿಎಂ ತಗೊಂಡು ಏನ್ ಮಾಡಬೇಕು, ಆದರೆ ಸಿಎಂ ಆಗಬೇಕು, ಲಿಂಗಾಯತರಿಗೆ ಸಿಎಂ ಸ್ಥಾನ ಸಿಗಬೇಕು, ಯಾವಾಗಲೂ ಸಿಎಂ ಹುದ್ದೆಗೆ ನಮ್ಮ ರೇಸ್ ಇದ್ದೇ ಇರುತ್ತದೆ ಎಂದು ಹೇಳಿದರು.
ಸಿದ್ದರಾಮಯ್ಯ ಸರ್ಕಾರದಲ್ಲಿ ಲಿಂಗಾಯತರು ಮೂಲೆಗುಂಪು ಚರ್ಚೆ ವಿಚಾರ ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ಪುನರುಚ್ಚಿಸಿದ್ದು, ಲಿಂಗಾಯತರಿಗೆ ಸರಿಯಾದ ಸ್ಥಾನಮಾನ ಸಿಗ್ತಿಲ್ಲ, ಲಿಂಗಾಯತ ಅಧಿಕಾರಿಗಳಿಗೆ ಪ್ರಮುಖ ಹುದ್ದೆಗಳೇ ಸಿಗ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ತಮ್ಮ ಸಮುದಾಯವರಿಗೆ ಮಣೆ ಹಾಕ್ತಿದ್ದಾರೆ ಅಂತ ಪರೋಕ್ಷ ವಾಗ್ದಾಳಿ ನಡೆಸಿದ ಶಾಮನೂರು ಶಿವಶಂಕರಪ್ಪ ಅವರು, ನಿಜಲಿಂಗಪ್ಪ, ಜೆ.ಎಚ್.ಪಾಟೇಲರು, ವೀರೇಂದ್ರ ಪಾಟೀಲರು, ಬಿ. ಎಸ್. ಯಡಿಯೂರಪ್ಪ ಅವರೆಲ್ಲರೂ ಇದ್ದಾಗ ಎಲ್ಲರೂ ಚೆನ್ನಾಗಿಯೇ ಇದ್ದರು, ಈಗ ನಮ್ಮವರು ಕಂಗಾಲಾಗಿದ್ದಾರೆ, ಸರ್ಕಾರದ ಆಯಾಕಟ್ಟಿನ ಪ್ರಮುಖ ಹುದ್ದೆಗಳು ನಮ್ಮ ಸಮಾಜದವರಿಗೆ ಕೊಟ್ಟಿಲ್ಲ ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಆಡಳಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.