Home ಕ್ರೈಂ ನ್ಯೂಸ್ ಗೋಲ್ಡ್ ಲೋನ್ ವಿಚಾರ: ದಾವಣಗೆರೆಯ ಶಿರಮಗೊಂಡನಹಳ್ಳಿಯ ಕೆನರಾ ಬ್ಯಾಂಕ್ ಮ್ಯಾನೇಜರ್ ಜೊತೆಗೆ ವಾಗ್ವಾದ: ಮುಂದೇನಾಯ್ತು?
ಕ್ರೈಂ ನ್ಯೂಸ್ದಾವಣಗೆರೆ

ಗೋಲ್ಡ್ ಲೋನ್ ವಿಚಾರ: ದಾವಣಗೆರೆಯ ಶಿರಮಗೊಂಡನಹಳ್ಳಿಯ ಕೆನರಾ ಬ್ಯಾಂಕ್ ಮ್ಯಾನೇಜರ್ ಜೊತೆಗೆ ವಾಗ್ವಾದ: ಮುಂದೇನಾಯ್ತು?

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಮಗೊಂಡನಹಳ್ಳಿ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಗೋಲ್ಡ್ ಲೋನ್ ವಿಚಾರಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ನ ಮ್ಯಾನೇಜರ್ ಹಾಗೂ ವ್ಯಕ್ತಿ ನಡುವೆ ಮಾತಿನ ಚಕಮಕಿ ನಡೆದು ಗಲಾಟೆ ಸಂಭವಿಸಿದೆ.

ಘಟನೆ ಕುರಿತು ದೂರುದಾರರು ತಕ್ಷಣ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ 112 ಹೊಯ್ಸಳ ಗಸ್ತು ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಇಬ್ಬರೊಂದಿಗೆ ಮಾತುಕತೆ ನಡೆಸಿ ಸೂಕ್ತ ತಿಳುವಳಿಕೆ ಹಾಗೂ ಬುದ್ಧಿವಾದ ಹೇಳಿ ಪರಿಸ್ಥಿತಿಯನ್ನು ತಿಳಿಗೊಳಿಸಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯವಿದ್ದಲ್ಲಿ ಮುಂದಿನ ಕಾನೂನು ಕ್ರಮಕ್ಕಾಗಿ ಸಂಬಂಧಪಟ್ಟ ಪೊಲೀಸ್ ಠಾಣೆಗೆ ದೂರು ನೀಡುವಂತೆ ಸೂಚಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles