ದಾವಣಗೆರೆ: ನಗರದ ಶ್ರೀನೇತಾಜಿ ಸುಭಾಷ್ ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಖಾಲಿ ಇರುವ ಷಟಲ್ ಬ್ಯಾಡ್ಮಿಂಟನ್ ತರಬೇತುದಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಈ ನೇಮಕಾತಿ ನಡೆಯುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಆಸಕ್ತ ಮತ್ತು ನುರಿತ ತರಬೇತುದಾರರು ದಾವಣಗೆರೆಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಸಹಾಯಕ ನಿರ್ದೇಶಕರ ಕಾರ್ಯಾಲಯದಿಂದ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 16ರ ಒಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Badminton Coaching Jobs Karnataka
- DAVANAGERE NEWS
- Department of Youth Empowerment and Sports
- Netaji Subhash Chandra Bose Indoor Stadium
- Shuttle Badminton Coach Recruitment
- Sports Coach Vacancy 2026.
- ಉದ್ಯೋಗ ಮಾಹಿತಿ
- ಕ್ರೀಡಾ ತರಬೇತುದಾರರ ಅರ್ಜಿ
- ದಾವಣಗೆರೆ ಕ್ರೀಡಾಂಗಣ
- ದಾವಣಗೆರೆ ಸುದ್ದಿ
- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
- ಷಟಲ್ ಬ್ಯಾಡ್ಮಿಂಟನ್ ತರಬೇತುದಾರರ ನೇಮಕಾತಿ





Leave a comment