Home ದಾವಣಗೆರೆ ದಾವಣಗೆರೆ, ಬಾಗಲಕೋಟೆ ಬೈ ಎಲೆಕ್ಷನ್ ಗೆ ಮುಹೂರ್ತ ಫಿಕ್ಸ್: ಏಪ್ರಿಲ್ 9ಕ್ಕೆ ಚುನಾವಣೆ, ಮೇ. 4ಕ್ಕೆ ಫಲಿತಾಂಶ
ದಾವಣಗೆರೆನವದೆಹಲಿಬೆಂಗಳೂರು

ದಾವಣಗೆರೆ, ಬಾಗಲಕೋಟೆ ಬೈ ಎಲೆಕ್ಷನ್ ಗೆ ಮುಹೂರ್ತ ಫಿಕ್ಸ್: ಏಪ್ರಿಲ್ 9ಕ್ಕೆ ಚುನಾವಣೆ, ಮೇ. 4ಕ್ಕೆ ಫಲಿತಾಂಶ

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಏಪ್ರಿಲ್ 9ಕ್ಕೆ ನಡೆಯಲಿದೆ. ಅದೇ ರೀತಿಯಲ್ಲಿ ಬಾಗಲಕೋಟೆ ಬೈ ಎಲೆಕ್ಷನ್ ಸಹ ಅಂದೇ ನಡೆಯಲಿದೆ. ಮೇ. 4ಕ್ಕೆ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.

ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ತಯಾರಿ ಪ್ರಾರಂಭಿಸಿವೆ. ಮಾತ್ರವಲ್ಲ, ಟಿಕೆಟ್ ಆಕಾಂಕ್ಷಿಗಳ ಮನವೊಲಿಕೆಗೆ ಯತ್ನಗಳು ಮುಂದುವರಿದಿವೆ. ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ.

ಡಾ. ಶಾಮನೂರು ಶಿವಶಂಕರಪ್ಪರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎಸ್. ಎಸ್. ಮಲ್ಲಿಕಾರ್ಜುನ್ ಮತ್ತು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ದಂಪತಿ ಪುತ್ರ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಬೇಕೆಂಬ ಆಗ್ರಹ ಬಲವಾಗಿ ಕೇಳಿ ಬರುತ್ತಿದೆ. ಇನ್ನು ಅಲ್ಪಸಂಖ್ಯಾತ ಸಮುದಾಯದಿಂದ ಪ್ರಮುಖವಾಗಿ ಸೈಯದ್ ಸೈಫುಲ್ಲ ಪುತ್ರ ಸೈಯದ್ ಖಾಲಿದ್ ಅಹ್ಮದ್, ಅಬ್ದುಲ್ ಜಬ್ಬಾರ್ ಅವರು ಟಿಕೆಟ್ ಕೇಳಿದ್ದಾರೆ. ಪಕ್ಷದ ಹೈಕಮಾಂಡ್ ನಿರ್ಧಾರದತ್ತ ಎಲ್ಲರ ಚಿತ್ತ ನೆಟ್ಟಿದೆ.

ಬಾಗಲಕೋಟೆ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಏಪ್ರಿಲ್ 9ಕ್ಕೆ ನಡೆಯಲಿದೆ. ಹೆಚ್. ವೈ. ಮೇಟಿ ನಿಧನದಿಂದ ತೆರವಾಗಿರುವ ಈ ಕ್ಷೇತ್ರಕ್ಕೆ ಮೇಟಿ ಅವರ ಪುತ್ರರು ಹಾಗೂ ಪುತ್ರಿ ಆಕಾಂಕ್ಷಿಯಾಗಿದ್ದಾರೆ. ಹೆಚ್. ವೈ. ಮೇಟಿ ಅವರ ಕುಟುಂಬಕ್ಕೆ ಟಿಕೆಟ್ ಸಿಗಲಿದೆ. ಮೇ 4ಕ್ಕೆ ಫಲಿತಾಂಶ ಹೊರ ಬೀಳಲಿದೆ.

Share

Leave a comment

Leave a Reply

Your email address will not be published. Required fields are marked *