ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಶ್ರೀನಿವಾಸ್ ದಾಸಕರಿಯಪ್ಪ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ಈ ಮೂಲಕ ಎಸ್ಟಿ ಸಮುದಾಯದ ಯುವ ನಾಯಕನಿಗೆ ಮಣೆ ಹಾಕಿದೆ.
ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸಿರುವ ಶ್ರೀನಿವಾಸ್ ದಾಸಕರಿಯಪ್ಪ ಅವರು ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಡಾ. ಜಿ. ಎಂ. ಸಿದ್ದಶ್ವರರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಮಾತ್ರವಲ್ಲ, ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ಬಣದ ವಿರುದ್ಧ ಯಾವುದೇ ಮಾತನಾಡಿರಲಿಲ್ಲ. ವಿರೋಧವೂ ವ್ಯಕ್ತಪಡಿಸಿರಲಿಲ್ಲ. ಎರಡು ಬಣಗಳ ಜೊತೆ ಉತ್ತಮ ಒಡನಾಟ ಹೊಂದಿದ್ದ ಶ್ರೀನಿವಾಸ್ ದಾಸಕರಿಯಪ್ಪ ಅವರಿಗೆ ಬಿಜೆಪಿ ಮಣೆ ಹಾಕುವ ಮೂಲಕ ತಂತ್ರಗಾರಿಕೆ ನಡೆಸಿದೆ.
ಶ್ರೀನಿವಾಸ್ ದಾಸಕರಿಯಪ್ಪ ಅವರು 2023ರ ವಿಧಾನಸಭೆ ಚುನಾವಣೆ ವೇಳೆಯೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಭರ್ಜರಿ ಓಡಾಟ ನಡೆಸಿದ್ದರು. ಆದರೆ ಅಂತಿಮವಾಗಿ ಅಜಯ್ ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಸುಮಾರು 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಹೀನಾಯ ಸೋಲು ಅನುಭವಿಸಿದ್ದರು. ಡಾ. ಶಾಮನೂರು ಶಿವಶಂಕರಪ್ಪರು ಭರ್ಜರಿ ಜಯಭೇರಿ ಬಾರಿಸಿದ್ದರು.
ಶ್ರೀನಿವಾಸ್ ದಾಸಕರಿಯಪ್ಪ ಅವರು ದಾಸಕರಿಯಪ್ಪ ಅವರ ಪುತ್ರ. ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದ ಅವರ ತಂದೆ ದಾಸಕರಿಯಪ್ಪ ಅವರು ಜೆಡಿಎಸ್ ನಲ್ಲಿ ಪ್ರಬಲ ನಾಯಕರಾಗಿದ್ದರು.
ಅವರ ಪುತ್ರನಿಗೆ ಮಣೆ ಹಾಕುವ ಮೂಲಕ ಬಿಜೆಪಿಯು ಹೊಸ ದಾಳ ಉರುಳಿಸಿದೆ.
ಡಾ. ಶಾಮನೂರು ಶಿವಶಂಕರಪ್ಪರ ನಿಧನದಿಂದ ತೆರವಾದ ಈ ಕ್ಷೇತ್ರಕ್ಕೆ ಶ್ರೀನಿವಾಸ್ ದಾಸಕರಿಯಪ್ಪ ಅವರು ಬಿಜೆಪಿಯ ಹುರಿಯಾಳಾಗಿದ್ದು, ತೀವ್ರ ಪ್ರಬಲ ಪೈಪೋಟಿ ನೀಡಲು ತಂತ್ರಗಾರಿಕೆ ಆರಂಭಿಸಿದ್ದಾರೆ.
- BJP Strategy Davanagere
- Davanagere Politics News
- Davanagere South Bye-election
- Davanagere South Candidate
- GM Siddeshwar
- Karnataka Bypolls 2026
- MP Renukacharya
- Shamanur Shivashankarappa
- Srinivas Dasakariyappa BJP Ticket
- ST Community Leader
- ಎಂಪಿ ರೇಣುಕಾಚಾರ್ಯ ಬಣ
- ಎಸ್ಟಿ ಸಮುದಾಯದ ನಾಯಕ
- ಕರ್ನಾಟಕ ಉಪಚುನಾವಣೆ 2026
- ಜಿಎಂ ಸಿದ್ದೇಶ್ವರ್ ಆಪ್ತ
- ದಾವಣಗೆರೆ ದಕ್ಷಿಣ ಉಪಚುನಾವಣೆ
- ದಾವಣಗೆರೆ ರಾಜಕೀಯ
- ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ
- ಬಿಜೆಪಿ ತಂತ್ರಗಾರಿಕೆ.
- ಶಾಮನೂರು ಶಿವಶಂಕರಪ್ಪ ನಿಧನ




Leave a comment