Home ದಾವಣಗೆರೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಮತ ಎಣಿಕೆ: ಮೊದಲ ಸುತ್ತಿನಲ್ಲಿ ಶ್ರೀನಿವಾಸ್ ದಾಸಕರಿಯಪ್ಪ ಮುನ್ನಡೆ, ಸಮರ್ಥ್ ಶಾಮನೂರುಗೆ ಹಿನ್ನೆಡೆ!
ದಾವಣಗೆರೆಬೆಂಗಳೂರು

ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಮತ ಎಣಿಕೆ: ಮೊದಲ ಸುತ್ತಿನಲ್ಲಿ ಶ್ರೀನಿವಾಸ್ ದಾಸಕರಿಯಪ್ಪ ಮುನ್ನಡೆ, ಸಮರ್ಥ್ ಶಾಮನೂರುಗೆ ಹಿನ್ನೆಡೆ!

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಬಿರುಸುಗೊಂಡಿದೆ. ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ 572 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹಿನ್ನೆಡೆ ಅನುಭವಿಸಿದ್ದಾರೆ. ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು, ಸಮರ್ಥ್ ಶಾಮನೂರು 3134 ಮತಗಳನ್ನು ಪಡೆದಿದ್ದರೆ, ಶ್ರೀನಿವಾಸ್ ದಾಸಕರಿಯಪ್ಪ ಅವರು 3711 ಮತಗಳನ್ನು ಪಡೆಯುವ ಮೂಲಕ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಎಸ್ ಡಿಪಿಐ ಅಭ್ಯರ್ಥಿ ಅಪ್ಸರ್ ಕೊಡ್ಲಿಬೆಟ್ಟು 638 ಮತಗಳನ್ನು ಪಡೆದಿದ್ದಾರೆ. ಉಳಿದಂತೆ ಹಲವು ಅಭ್ಯರ್ಥಿಗಳು ಎರಡಂಕಿಯನ್ನೂ ದಾಟಿಲ್ಲ.

 ದಾವಣಗೆರೆ ದಕ್ಷಿಣ ವಿಧಾಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗುತ್ತಿದೆ. ಮೊದಲ ಸುತ್ತಿನ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ಆರಂಭಿಕ ಮುನ್ನಡೆ ಸಾಧಿಸುವ ಮೂಲಕ ಕಾಂಗ್ರೆಸ್ ಪಾಳಯದಲ್ಲಿ ಆತಂಕ ಮೂಡಿಸಿದ್ದಾರೆ.

ಮೊದಲ ಸುತ್ತಿನ ಅಂತ್ಯಕ್ಕೆ ಶ್ರೀನಿವಾಸ್ ದಾಸಕರಿಯಪ್ಪ 3,711 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 3,134 ಮತಗಳನ್ನು ಪಡೆಯುವ ಮೂಲಕ 572 ಮತಗಳ ಹಿನ್ನಡೆ ಅನುಭವಿಸಿದ್ದಾರೆ. ಎಸ್‌ಡಿಪಿಐ ಅಭ್ಯರ್ಥಿ ಅಪ್ಸರ್ ಕೊಡ್ಲಿಬೆಟ್ಟು 638 ಮತಗಳನ್ನು ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಈ ಕ್ಷೇತ್ರದಲ್ಲಿ ಅವರ ಮೊಮ್ಮಗ ಸಮರ್ಥ್ ಸ್ಪರ್ಧಿಸಿದ್ದು, ಈ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ.

Share

Leave a comment

Leave a Reply

Your email address will not be published. Required fields are marked *