ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಶಾಮನೂರು ಶಿವಶಂಕರಪ್ಪನವರು ಜ್ಯಾತ್ಯಾತೀತವಾಗಿ, ಪಕ್ಷಾತೀತವಾಗಿ ಮಾಡಿದ ಸೇವೆಗೆ ಜನತೆ ಅವರನ್ನು ಆರು ಬಾರಿ ಆಯ್ಕೆ ಮಾಡಿದ್ದರು ಅವರ ಪ್ರತಿನಿಧಿಯಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಮರ್ಥ್ ಅವರು ಉಪಚುನಾವಣೆಗೆ ಬಂದಿದ್ದಾರೆ. ಅವರಿಗೆ ನಿಮ್ಮ ಆಶೀರ್ವಾದ ಮಾಡಿ ಗೆಲ್ಲಿಸಿ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಮನವಿ ಮಾಡಿದರು.
ದಾವಣಗೆರೆಯ ದಕ್ಷಿಣ ಕ್ಷೇತ್ರದ ಬೂದಾಳ್ ರಸ್ತೆ, ಎಸ್ ಪಿಎಸ್ ನಗರ, ದೊಡ್ಡ ಬೂದಿಹಾಳ್, ಚೌಡೇಶ್ವರಿ ದೇವಸ್ಥಾನ ಸೇರಿದಂತೆ ವಿವಿಧೆಡೆ ಕಾಲ್ನಡಿಗೆ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ನಂತರ ಕ್ಷೇತ್ರದ ಜನರನ್ನುದ್ದೇಶಿಸಿ ಮಾತನಾಡಿದ ಅವರು ಸಮರ್ಥ್ ಶಾಮನೂರು ಪರ ಎಲ್ಲ ಸಮಾಜದ ಮುಖಂಡರು, ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು ಎಲ್ಲರೂ ಒಗ್ಗೂಡಿಕೊಂಡು ಪ್ರಚಾರ ಮಾಡಿದ್ದಾರೆ. ಜನರಿಗೆ ಸಂಪೂರ್ಣ ಅರಿವು ಇದೆ. ತಮ್ಮ ಕ್ಷೇತ್ರದ ಅಭಿವೃದ್ಧಿ ಹಿತವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಸಮರ್ಥ್ ಅವರಿಗೆ ಮತ ಹಾಕುತ್ತೇವೆ ಎಂದು ಜನರೇ ಹೇಳುತ್ತಿದ್ದಾರೆ ಎಂದರು. ಯಾವುದೇ ಜಾತಿ, ಧರ್ಮ ನೋಡದೆ ಎಲ್ಲಾ ಬಡವರಿಗೂ ಗ್ಯಾರಂಟಿ ಯೋಜನೆಗಳನ್ನು ನಮ್ಮ ಕಾಂಗ್ರೆಸ್ ಪಕ್ಷ ನೀಡಿದೆ.ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ಹಾಗೂ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪನವರು ಬಸವಾದಿ ಶಿವಶರಣರ ತತ್ವ ಸಿದ್ಧಾಂತಗಳ ಆಧಾರದಲ್ಲಿ ಕೆಲಸ ಮಾಡಿದ್ದಾರೆ. ಅವರ ಹಾದಿಯಲ್ಲಿ ಸಮರ್ಥ್ ಕೂಡ ಜನಪ್ರತಿನಿಧಿಯಾಗಿ ಬದ್ಧತೆಯಿಂದ ಕೆಲಸ ಮಾಡುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ದಾವಣಗೆರೆ ಅಭಿವೃದ್ಧಿಯನ್ನು ನೋಡಿ ನಮ್ಮ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ, ವಿರೋಧ ಪಕ್ಷದವರು ಟೀಕೆ ಮಾಡುವುದಕ್ಕೆ ಇಲ್ಲಸಲ್ಲದ ರೀತಿ ಮಾತನಾಡುತ್ತಿದ್ದಾರೆ. ಅಭಿವೃದ್ಧಿ ಬಗ್ಗೆ ಜನತೆಗೆ ತಿಳಿದಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಅಲೆಯಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ ಅಪ್ಪಾಜಿ ಅವರಿಗೆ ಅರ್ಪಿಸುವ ಸಂದರ್ಭ ಈಗ ಒದಗಿ ಬಂದಿದೆ. ಏಪ್ರಿಲ್ 9 ರಂದು ಕ್ರಮ ಸಂಖ್ಯೆ 3 ಹಸ್ತದ ಗುರುತಿಗೆ ಹೆಚ್ಚಿನ ಮತಗಳನ್ನು ನೀಡಿ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು,ಅಭಿಮಾನಿಗಳು ಹಾಗೂ ಕ್ಷೇತ್ರದ ಜನರು ಇದ್ದರು.
- Congress Campaign
- DAVANAGERE NEWS
- Davanagere South By-election
- Dr. Prabha Mallikarjun
- Election 2026.
- Karnataka Politics
- Samarth Shamanur
- Shamanur Shivashankarappa
- ಕರ್ನಾಟಕ ರಾಜಕೀಯ
- ಕಾಂಗ್ರೆಸ್ ಪ್ರಚಾರ
- ಚುನಾವಣೆ 2026
- ಡಾ. ಪ್ರಭಾ ಮಲ್ಲಿಕಾರ್ಜುನ
- ದಾವಣಗೆರೆ ಕಾಂಗ್ರೆಸ್
- ದಾವಣಗೆರೆ ದಕ್ಷಿಣ ಉಪ ಚುನಾವಣೆ 2026
- ಶಾಮನೂರು ಶಿವಶಂಕರಪ್ಪ
- ಸಮರ್ಥ್ ಶಾಮನೂರು





Leave a comment