Home ದಾವಣಗೆರೆ BIG BREAKING: ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆ ಮಲ್ಲಿಕಾರ್ಜುನ್ ನಿವಾಸಕ್ಕೆ ಜಮೀರ್ ಅಹ್ಮದ್ ಭೇಟಿ, ಅಸಮಾಧಾನ ವದಂತಿಗೆ ತೆರೆ!
ದಾವಣಗೆರೆಬೆಂಗಳೂರು

BIG BREAKING: ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆ ಮಲ್ಲಿಕಾರ್ಜುನ್ ನಿವಾಸಕ್ಕೆ ಜಮೀರ್ ಅಹ್ಮದ್ ಭೇಟಿ, ಅಸಮಾಧಾನ ವದಂತಿಗೆ ತೆರೆ!

Share
ಜಮೀರ್ ಅಹ್ಮದ್
Share

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವಿಗೆ ಕಾಂಗ್ರೆಸ್ ಟೊಂಕ ಕಟ್ಟಿ ನಿಂತಿದೆ. ವಸತಿ ಸಚಿವ ಜಮೀರ್ ಅಹ್ಮದ್ ಅವರು ಇಂದು ದಾವಣಗೆರೆಗೆ ಆಗಮಿಸಿದ್ದು, ಒಗ್ಗಟ್ಟಿನ ಸಂದೇಶ ಸಾರಿದ್ದಾರೆ.

ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿನ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಚಿವ ಜಮೀರ್ ಅಹ್ಮದ್ ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.

ವರದಿಯ ಮುಖ್ಯಾಂಶಗಳು

  • ಒಗ್ಗಟ್ಟಿನ ಸಂದೇಶ: ದಾವಣಗೆರೆ ದಕ್ಷಿಣ ಉಪಚುನಾವಣೆಯ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ನಿವಾಸಕ್ಕೆ ಭೇಟಿ ನೀಡಿ, ಇಬ್ಬರ ನಡುವೆ ಯಾವುದೇ ಅಸಮಾಧಾನವಿಲ್ಲ ಎಂಬ ಸ್ಪಷ್ಟ ಸಂದೇಶ ನೀಡಿದರು.

  • ಟಿಕೆಟ್ ವಿವಾದಕ್ಕೆ ತೆರೆ: ಈ ಮೊದಲು ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂದು ಜಮೀರ್ ಒತ್ತಾಯಿಸಿದ್ದರು. ಆದರೆ ಹೈಕಮಾಂಡ್ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಿದ ನಂತರ, ಈಗ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಒಂದಾಗಿರುವುದಾಗಿ ತಿಳಿಸಿದರು.

  • ಪತ್ರಿಕಾಗೋಷ್ಠಿ: ಎಂಸಿಸಿ ಬಿ ಬ್ಲಾಕ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವರುಗಳು ಪರಸ್ಪರ ಆಲಿಂಗಿಸಿಕೊಳ್ಳುವ ಮೂಲಕ ಕಾರ್ಯಕರ್ತರಲ್ಲಿನ ಗೊಂದಲಕ್ಕೆ ತೆರೆ ಎಳೆದರು.

ಈ ಬಾರಿಯ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂಬ ಒತ್ತಾಯ ಮಾಡಿದ್ದ ಜಮೀರ್ ಅಹ್ಮದ್ ಹೈಕಮಾಂಡ್ ಮಟ್ಟದಲ್ಲಿಯೂ ಲಾಬಿ ನಡೆಸಿದ್ದರು.

ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಶಾಮನೂರು ಶಿವಶಂಕರಪ್ಪರ ಮೊಮ್ಮಗ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ಘೋಷಿಸಿತ್ತು. ಅಂದಿನಿಂದ ದಾವಣಗೆರೆಗೆ ಆಗಮಿಸಿದ ಜಮೀರ್ ಅಹ್ಮದ್ ಇಂದು ಎಸ್. ಎಸ್. ಮಲ್ಲಿಕಾರ್ಜುನ್ ನಿವಾಸಕ್ಕೆ ಆಗಮಿಸಿ ಕುಟುಂಬಸ್ಥರೊಂದಿಗೆ ಮಾತನಾಡಿದರು. ಈ ವೇಳೆ ಎಸ್. ಎಸ್. ಮಲ್ಲಿಕಾರ್ಜುನ್ ಮತ್ತು ಜಮೀರ್ ಅಹ್ಮದ್ ಪರಸ್ಪರ ತಬ್ಬಿಕೊಂಡು ಒಗ್ಗಟ್ಟಿನ ಸಂದೇಶ ಸಾರಿದರು.

Share

Leave a comment

Leave a Reply

Your email address will not be published. Required fields are marked *