Home ದಾವಣಗೆರೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ಉಮೇದುವಾರಿಕೆ ಸಲ್ಲಿಕೆ
ದಾವಣಗೆರೆಬೆಂಗಳೂರು

ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ಉಮೇದುವಾರಿಕೆ ಸಲ್ಲಿಕೆ

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ಅವರು ನಾಮಪತ್ರ ಸಲ್ಲಿಸಿದರು.

ದಾವಣಗೆರೆ ಮಹಾನಗರ ಪಾಲಿಕೆಯ ಚುನಾವಣಾಧಿಕಾರಿ ಕಾರ್ಯಾಲಯಕ್ಕೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು. ಬಿಜೆಪಿ ಆಕಾಂಕ್ಷಿಗಳಾಗಿದ್ದ ಅಜಯ್ ಕುಮಾರ್, ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಗುರುವಾರ ಬಿಜೆಪಿ ಹೈಕಮಾಂಡ್ ಶ್ರೀನಿವಾಸ್ ದಾಸಕರಿಯಪ್ಪ ಅವರಿಗೆ ಅಧಿಕೃತವಾಗಿ ಬಿಜೆಪಿ ಟಿಕೆಟ್ ಘೋಷಣೆ ಮಾಡಿತ್ತು. ಆ ಬಳಿಕ ಶ್ರೀನಿವಾಸ್ ದಾಸಕರಿಯಪ್ಪರು ಫುಲ್ ಆಕ್ಟೀವ್ ಆಗಿದ್ದು, ಎಲ್ಲೆಡೆ ಸಂಚಾರ ಆರಂಭಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಬಿ ಫಾರಂ ಸಿಗದಿದ್ದರೂ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಿದ್ದರು. ಈ ನಡುವೆ ಶ್ರೀನಿವಾಸ್ ದಾಸಕರಿಯಪ್ಪರೂ ಉಮೇದುವಾರಿಕೆ ಸಲ್ಲಿಸಿದ್ದಾರೆ. ಮತ್ತೊಂದು ಬೆಳವಣಿಗೆಯಲ್ಲಿ ಸಾದಿಕ್ ಪೈಲ್ವಾನ್ ಅವರು ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸ್ ನಿಂದ ಬಿ ಫಾರಂ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶ್ರೀನಿವಾಸ್ ದಾಸಕರಿಯಪ್ಪರಿಗೆ ಮಾಜಿ ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಅವರ ಬೆಂಬಲ ಇದ್ದು, ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದರು. ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಿ ಕಮಲ ಅರಳಿಸುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Share

Leave a comment

Leave a Reply

Your email address will not be published. Required fields are marked *