Home ಕ್ರೈಂ ನ್ಯೂಸ್ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಶಿವಪುರ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ಖುದ್ದಾಗಿ ವೀಕ್ಷಿಸಿದ ಡಿಸಿ
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ದಾವಣಗೆರೆ ದಕ್ಷಿಣ ಉಪ ಚುನಾವಣೆ: ಶಿವಪುರ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ಖುದ್ದಾಗಿ ವೀಕ್ಷಿಸಿದ ಡಿಸಿ

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ. ಎಂ. ಅವರು ಕೊಂಡಜ್ಜಿ ರಸ್ತೆಯ ಶಿವಪುರ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ವಾಹನ ತಪಾಸಣಾ ಕಾರ್ಯವನ್ನು ಖುದ್ದಾಗಿ ವೀಕ್ಷಿಸಿದರು.

ಚೆಕ್‌ಪೋಸ್ಟ್‌ನಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಾಹನಗಳನ್ನು ತಪಾಸಣೆ ಮಾಡುವ ವಿಧಾನವನ್ನು ಪರಿಶೀಲಿಸಿ, ಅಕ್ರಮ ಹಣ ಸಾಗಾಟ, ಮದ್ಯದ ಅಕ್ರಮ ಚಟುವಟಿಕೆಗಳು ಹಾಗೂ ಮತದಾರರಿಗೆ ಹಂಚಲು ಸಾಗಿಸುವ ಉಡುಗೊರೆಗಳ ಮೇಲೆ ತೀವ್ರ ನಿಗಾ ವಹಿಸುವಂತೆ ಸೂಚನೆ ನೀಡಿದರು.

ಪರಿಶೀಲನೆಯ ಸಂದರ್ಭದಲ್ಲಿ ಚುನಾವಣಾ ವಿಭಾಗದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles